Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ನವೆಂಬರ್ 13 ರಿಂದ 21 ದಿನಗಳ ಕಾಲ ಸಾರಂಗ ಮಠದಲ್ಲಿ ವಿವಿಧ ಕಾರ್ಯಕ್ರಮಗಳು

ಪತ್ರಿಕಾ ಗೋಷ್ಠಿಯಲ್ಲಿ ಸಾರಂಗಮಠದ ಪರಮ ಪೂಜ್ಯ ಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರರು ಮಾತನಾಡಿದರು. ಸಿಂದಗಿ : ಪಟ್ಟಣದ ಸಾರಂಗಮಠದ ಕಾಯಕಯೋಗಿ ಲಿಂ. ಚೆನ್ನವೀರ ಮಹಾಸ್ವಾಮಿಗಳ 131 ನೇ ಜಯಂತ್ಯೋತ್ಸವ ನಿಮಿತ್ಯ ನವಂಬರ್ 13 ರಿಂದ ಡಿಶೆಂಬರ್ 3 ರ ವರೆಗೆ ಸುಮಾರು 21…

ಪತ್ರಿಕಾ ಗೋಷ್ಠಿಯಲ್ಲಿ ಸಾರಂಗಮಠದ ಪರಮ ಪೂಜ್ಯ ಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರರು ಮಾತನಾಡಿದರು.

ಸಿಂದಗಿ : ಪಟ್ಟಣದ ಸಾರಂಗಮಠದ ಕಾಯಕಯೋಗಿ ಲಿಂ. ಚೆನ್ನವೀರ ಮಹಾಸ್ವಾಮಿಗಳ 131 ನೇ ಜಯಂತ್ಯೋತ್ಸವ ನಿಮಿತ್ಯ ನವಂಬರ್ 13 ರಿಂದ ಡಿಶೆಂಬರ್ 3 ರ ವರೆಗೆ ಸುಮಾರು 21 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ಜರುಗುವವು ಎಂದು ಸಾರಂಗಮಠದ ಪೂಜ್ಯ ಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.

  ಪಟ್ಟಣದ ಸಾರಂಗಮಠದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಪ್ರತಿನಿತ್ಯ ಸಂಜೆ 6.30 ಗಂಟೆಗೆ ಉಜ್ಜಯನಿಯ ಲಿಂ ಶ್ರೀ ಸಿದ್ದಲಿಂಗ ಶಿವಾಚಾರ್ಯರ ಪುರಾಣ – ಪ್ರವಚನವನ್ನು ಶಾಹಪೂರದ ಶ್ರೀ ಸೂಗೂರೇಶ್ವರ ಶ್ರೀಗಳಿಂದ ನೆರವೇರುವುದು. ಲಿಂ ಶ್ರೀ ಚನ್ನವೀರ ಮಹಾಸ್ವಾಮಿಗಳ ಜಯಂತಿ ದಿನವಾದ ನ.18 ರಂದು ತಾಲೂಕಿನ ಶ್ರೇಷ್ಠ ಕೃಷಿಕರಿಗೆ ನೀಡುವ ಸಾರಂಗ ಶ್ರೀ ಕೃಷಿ ಪ್ರಸಶ್ತಿಯನ್ನು ಆಲಮೇಲದ ಸಾವಯವ ಕೃಷಿಕ ಸುನೀಲ ನಾರಾಯಣಕರ ಅವರಿಗೆ ಪ್ರಶಸ್ತಿ ಫಲಕ ಮತ್ತು 11 ಸಾವಿರ ನಗದನ್ನು ನೀಡಿ ಗೌರವಿಸಲಾಗುವುದು.

ಖ್ಯಾತ ಖಗೋಳಶಾಸ್ತ್ರಜ್ಞ ಭಾಸ್ಕರಾಚಾರ್ಯ ಅವರ ಸ್ಮರಣೆಗಾಗಿ ನೀಡುವ ಭಾಸ್ಕರ ರಾಷ್ಟ್ರೀಯ ಪ್ರಶಸ್ತಿಯನ್ನು ಈ ಬಾರಿ ಅಂತಾರಾಷ್ಟ್ರೀಯ ಕೃಷಿ ತಜ್ಞ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಮಾಜಿ ಪ್ರಧಾನ ನಿರ್ದೇಶಕ, ಪದ್ಮಶ್ರೀ ಸುಬ್ಬಯ್ಯ ಅಯ್ಯಪ್ಪನ್ ಅವರಿಗೆ ಭಾಸ್ಕರ ಪ್ರಶಸ್ತಿ ಮತ್ತು 1 ಲಕ್ಷ ನಗದನ್ನು ನೀಡಿ ಗೌರವಿಸಲಾಗುವುದು. ಈ ಹಿಂದೆ ದೇಶದ ಖ್ಯಾತ ವಿಜ್ಞಾನಿಗಳಾದ ಸಿ.ಎನ್.ರಾವ್, ಯು.ಆರ್.ರಾವ್, ಡಾ. ಎ.ಎಸ್.ಪಾಟೀಲ, ಕೆ.ಕಸ್ತೂರಿರಂಗನ, ಇಸ್ರೋ ಮಾಜಿ ಅಧ್ಯಕ್ಷ ಡಾ.ಕಿರಣಕುಮಾರ ಅವರಿಗೆ ನೀಡಿ ಗೌರವಿಸಿದೆ.

ನ.27 ರಂದು ಸಿದ್ದಾಂತ ಶಿಖಾಮಣಿ ಕರ್ತೃ ಸಾಲೋಟಗಿ ಶ್ರೀ ಶಿವಯೋಗಿ ಶಿವಾಚಾರ್ಯರ ಸ್ಮರಣೆಯಲ್ಲಿ ನೀಡುವ ಶಿವಯೋಗಿ ಶಿವಾಚಾರ್ಯ ಪ್ರಶಸ್ತಿಯನ್ನು ಮಡಕೇರಿಯ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಸಿ.ಶಿವಕುಮಾರಸ್ವಾಮಿ ಅವರಿಗೆ ಪ್ರಶಸ್ತಿ ಮತ್ತು 1 ಲಕ್ಷ ನಗದು ನೀಡಿ ಗೌರವಿಸಲಾಗುವುದು.

ಡಿ.2 ರಂದು ಶ್ರೀ ವೀರಭದ್ರೇಶ್ವರ ಮತ್ತು ಭದ್ರಕಾಳಿ ಅಮ್ಮನವರ ಕಲ್ಯಾಣಮಹೋತ್ಸವ ಮತ್ತು ಡಿ.3 ರಂದು ಶ್ರೀ ವೀರಭದ್ರ ದೇವರ ಮತ್ತು ಭದ್ರಕಾಳಿ ಅಮ್ಮನವರ ಮೂರ್ತಿಯನ್ನು ಬೆಳ್ಳಿ ರಥದೊಂದಿಗೆ ಮಹಿಳೆಯರೆ ಎಳೆಯುವ ಮೂಲಕ ಜಾತ್ರಾ ಮಹೋತ್ಸವ ನಡೆಯಲಿದೆ. ಅಂದು ಪುರಾಣ ಪ್ರವಚನ ಮುಕ್ತಾಯ ಸಮಾರಂಭ ನೆರವೇರುವುದು. ಕಾರಣ ಸಿಂದಗಿಯ ಸದ್ಬಕ್ತ ಮಂಡಳಿ ಶ್ರೀಮಠದಲ್ಲಿ ಜರುಗುವ ಎಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಸಾರಂಗ ಶ್ರೀಗಳು ತಿಳಿಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಕೊಣ್ಣೂರಿನ ಹೊರಗಿನ ಕಲ್ಯಾಣಮಠದ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಶಾಸಕ ಅಶೋಕ ಮನಗೂಳಿ, ಅಶೋಕ ವಾರದ, ಡಾ.ಶರಣಬಸವ ಜೋಗೂರ ಇದ್ದರು. 

vegadhut@gmail.com.

Leave a comment