Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ವಿದ್ಯಾರ್ಥಿಗಳು ಸಾಧನೆಗೆ ಮುಂದಾದರೆ ದೇಶ ಪ್ರಗತಿ ; ಎಂ.ಕೆ.ಇಂಗಳೆ

  ಮೋರಟಗಿ:  ಗ್ರಾಮದ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಸಿಂದಗಿ ಶಾಂತವೀರ ಪಟ್ಟಾಧ್ಯಕ್ಷರ ಕೈಗಾರಿಕ ಖಾಸಗಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಐ.ಟಿ.ಐ. ಘಟಿಕೋತ್ಸವ ಸಮಾರಂಭವನ್ನು ಎಇಇ ಎಂ.ಕೆ.ಇಂಗಳೆ ಉದ್ಘಾಟಿಸಿದರು. ಕುಶಲ ಕರ್ಮಿಗಳನ್ನು ತಯಾರಿಸುವ ಕೇಂದ್ರ ಐಟಿಐ ಕೇಂದ್ರಗಳಾಗಿವೆ. ಒಳ್ಳೆಯ ಕೌಶಲ್ಯ ಪಡೆದು…

 

ಮೋರಟಗಿ:  ಗ್ರಾಮದ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಸಿಂದಗಿ ಶಾಂತವೀರ ಪಟ್ಟಾಧ್ಯಕ್ಷರ ಕೈಗಾರಿಕ ಖಾಸಗಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಐ.ಟಿ.ಐ. ಘಟಿಕೋತ್ಸವ ಸಮಾರಂಭವನ್ನು ಎಇಇ ಎಂ.ಕೆ.ಇಂಗಳೆ ಉದ್ಘಾಟಿಸಿದರು.
ಕುಶಲ ಕರ್ಮಿಗಳನ್ನು ತಯಾರಿಸುವ ಕೇಂದ್ರ ಐಟಿಐ ಕೇಂದ್ರಗಳಾಗಿವೆ. ಒಳ್ಳೆಯ ಕೌಶಲ್ಯ ಪಡೆದು ಸಾಧನೆ ಮಾಡಿದರೆ ನಮ್ಮ ದೇಶ ಪ್ರಗತಿಯಾಗುತ್ತದೆ ಎಂದು ಕೆ.ಪಿ.ಟಿ.ಸಿ.ಎಲ್ ಎಇಇ ಎಂ.ಕೆ.ಇಂಗಳೆ ಹೇಳಿದರು.
ಮೋರಟಗಿ ಗ್ರಾಮದ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಸಿಂದಗಿ ಶಾಂತವೀರ ಪಟ್ಟಾಧ್ಯಕ್ಷರ ಖಾಸಗಿ ಕೈಗಾರಿಕಾ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಐ.ಟಿ.ಐ. ತರಬೇತಿ ಪೂರ್ಣಗೊಳಿಸಿ ಉತ್ತೀರ್ಣರಾದ ವಿದ್ಯಾರ್ಥಿಗಳ ಘಟಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಕೌಶಲ್ಯದ ಜೊತೆಗೆ ಶಿಸ್ತನ್ನು ಅಳವಡಿಸಿಕೊಂಡರೆ ವಿದ್ಯಾರ್ಥಿಗಳ ಭವಿಷ್ಯವೂ ಕೂಡ ಉಜ್ವಲವಾಗತ್ತದೆ. ಸಾಧನೆಗೆ ಸಾವಿರ ದಾರಿಗಳು ಇವೆ ಉತ್ತಮ ದಾರಿಯಲ್ಲಿ ಸಾಗಿ ಮುಂದಿನ ದಿನಗಳಲ್ಲಿ ದೇಶ ಕಂಡ ಉತ್ತಮ ಪ್ರಜೆಯಾಗಿ ಹೊರಹುಮ್ಮತ್ತೀರಿ ಎಂದು ಹೇಳಿದರು.


ಇದೇ ಸಂದರ್ಭದಲ್ಲಿ ಪ್ರಾಚಾರ್ಯ ಎಂ.ಸಿ.ಸಿಂದಗಿ ಮಾತನಾಡಿ ದುಡಿಯಬೇಕು, ದುಡಿಸಬೇಕು ಬಂದ ಸಂಪಾದನೆಯನ್ನು ಸಮಾಜಕ್ಕೆ ಉಪಯೋಗಿಸಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಈ ಹಿಂದೆ ನಮ್ಮ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಹೊರ ದೇಶದಲ್ಲಿ ಉದ್ಯೋಗವನ್ನು ಮಾಡುತ್ತಿದ್ದಾರೆ. ತಾವುಗಳು ಸಹ ಉತ್ತಮ ಅಂಕಗಳನ್ನು ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಗೆ ಮಾಡಿದ್ದಿರಿ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಲ್ಲಿನಾಥ ಸಿಂದಗಿ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಎನ್.ಎನ್.ಪಾಟೀಲ್, ಸದಸ್ಯ ಅಮೋಗೆಣ್ಣ ಯಂಕಂಚಿ, ಗ್ರಾಪಂ ಮಾಜಿ ಅಧ್ಯಕ್ಷ ಬಸಲಿಂಗಪ್ಪ ಸಾಹು ಬೋನಾಳ, ಆರ್.ಕೆ. ಪತ್ತಾರ, ಆಯ್.ಎಂ. ಗಣಾಚಾರಿ, ಜಿ.ಜಿ. ಕತ್ತಿ, ಸೇರಿದಂತೆ ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

vegadhut@gmail.com.

Leave a comment