Sunday, 25 October 2026 — ವೇಗದೂತ
BREAKING NEWS
News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ.
News

ಸಂಭ್ರಮದ ರಾಜ್ಯೋತ್ಸವ ಕುಣಿದು ಕುಪ್ಪಳಿಸಿದ ಕನ್ನಡ ಮನಸ್ಸುಗಳು

ಸಿಂದಗಿ: ಕನ್ನಡ ಎಂದರೆ ಕೇವಲ ವರ್ಣಮಾಲೆಯಲ್ಲ, ಅದು ಕನ್ನಡ ನಾಡು, ಶ್ರೀಗಂಧದ ನಾಡು, ಕರುನಾಡ ನಾಡು, ಸಾಧು-ಸಂತರು, ದಾಸರು, ಶಿವಶರಣರು ಹಾಗೂ ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂಬ ಹೆಸರೇ ಒಂದು ಧೀಮಂತ ಶಕ್ತಿ ಎಂದು ಎಚ್ ಜಿ ಪಪೂ ಮಹಾವಿದ್ಯಾಲಯದ…

ಸಿಂದಗಿ: ಕನ್ನಡ ಎಂದರೆ ಕೇವಲ ವರ್ಣಮಾಲೆಯಲ್ಲ, ಅದು ಕನ್ನಡ ನಾಡು, ಶ್ರೀಗಂಧದ ನಾಡು, ಕರುನಾಡ ನಾಡು, ಸಾಧು-ಸಂತರು, ದಾಸರು, ಶಿವಶರಣರು ಹಾಗೂ ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂಬ ಹೆಸರೇ ಒಂದು ಧೀಮಂತ ಶಕ್ತಿ ಎಂದು ಎಚ್ ಜಿ ಪಪೂ ಮಹಾವಿದ್ಯಾಲಯದ ಉಪನ್ಯಾಸಕಿ ಮುಕ್ತಾಯಕ್ಕ ಕತ್ತಿ ಹೇಳಿದರು.

ನಗರದ ಬಸವ ಮಂಟಪದಲ್ಲಿ ತಾಲೂಕು ಆಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಉಪನ್ಯಾಸ ಎಂದರೆ ಉಪಯೋಗಕ್ಕೆ ಬರುವುದುದನ್ನು ಪರರಿಗೆ ಅರ್ಥವಾಗುವ ರೀತಿಯಲ್ಲಿ ನ್ಯಾಯ ಬದ್ಧವಾಗಿ ಸರಳ ಭಾಷೆಯಲ್ಲಿ ಕಲೆಯೇ ಉಪನ್ಯಾಸ. ಕರ್ನಾಟಕ ಪದದ ಮೂಲ ಸಂಸ್ಕೃತ. ಸಂಸ್ಕೃತದ ಕನ್ನಡ ಎಂಬ ಪದದಿಂದ ಕರ್ನಾಟಕ ಹುಟ್ಟಿದೆ. ಕನ್ನಡಿಗರ ನಾಡು, ಕನ್ನಾಡು, ಕನ್ನಡ ನಾಡು ಎಂಬುದು ಇದರ ಅರ್ಥ. ಕರು+ನಾಡು= ಕರುನಾಡು ಎಂಬ ಪದವು ಕರ್ನಾಟಕವಾಯಿತು ಎನ್ನಲಾಗುತ್ತದೆ. ಕರು ಎಂದರೆ ಕಪ್ಪು, ಇದರರ್ಥ ಕಪ್ಪು ಮಣ್ಣಿನ ನಾಡು ಎಂದೂ ಸಹ ಹೇಳುವುದುಂಟು. ಅದು ನಮ್ಮನ್ನು ವರ್ಣರಂಜಿತ, ಶ್ರೀಮಂತ ಮತ್ತು ವೈವಿಧ್ಯಮಯ ರಾಷ್ಟ್ರವನ್ನಾಗಿ ಮಾಡಿದೆ ಎಂದು ಹೇಳಿದರು.

ಎಚ್ ಜಿ ಪ ಪೂ ಮಹಾವಿದ್ಯಾಲಯದ ಉಪನ್ಯಾಸಕಿ ಮುಕ್ತಾಯಕ್ಕ ಕತ್ತಿ ಉಪನ್ಯಾಸ ಮಾಡುತ್ತಿರುವುದು.

ಇದೇ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ ಶಾಸಕ ರಮೇಶ ಭೂಸನೂರ ಮಾತನಾಡಿ, ನಾಡಿನ ಏಕತೆ, ಸಮಾನತೆ, ಸ್ವಾಭಿಮಾನ ಹಾಗೂ ಸಹಬಾಳ್ವೆಯ ಸಂಕೇತವೇ ರಾಜ್ಯೋತ್ಸವ. ಕನ್ನಡ ನಾಡು ನುಡಿ ಉಳಿಸುವಲ್ಲಿ ಕನ್ನಡಿಗರ ಪಾತ್ರ ಬಹಳ ಮುಖ್ಯ. ನಾವು ಕನ್ನಡಿಗರು ನಮ್ಮ ಭಾಷೆಯನ್ನು ಮರೆಯಬಾರದು. ನಮ್ಮ ಕನ್ನಡ ತನವನ್ನು ಬಿಡಬಾರದು, ಕನ್ನಡಿಗರಾದ ನಾವು ನಾಡು ನುಡಿ ಬಗ್ಗೆ ಗೌರವ ಇರಬೇಕು ಹಾಗೆ ನಮ್ಮ ಕನ್ನಡ ನಾಡು ನುಡಿ ಉಳಿಸಿ-ಬೆಳೆಸಬೇಕು. ಮಾತನಾಡುವ ಭಾಷೆ ಕನ್ನಡ, ಅನ್ನ ನೀಡುವ ಭಾಷೆ ಕನ್ನಡ. ಪ್ರತಿ ಮನೆ ಮನಗಳಲ್ಲಿ ಕನ್ನಡ ರಾರಾಜಿಸಲಿ ಎಂದರು.

ಅಧ್ಯಕ್ಷತೆವಹಿಸಿದ ಶಾಸಕ ರಮೇಶ ಭೂಸನೂರ ಅಧ್ಯಕ್ಷಿಯ ನುಡಿ.

 ಸಂಭ್ರಮಿಸಿದ ಮಕ್ಕಳಲ್ಲಿ ಮಕ್ಕಳಾದ ಅಧಿಕಾರಿಗಳು

ಕುಣಿಯುತ್ತಾ ಸಂಭ್ರಮಿಸುತ್ತಿರುವ ಮಕ್ಕಳು
ಡೋಳ್ಳುಹಾಕಿ ಕುಣಿಯುತ್ತಿರುವ ತಾಲೂಕಾ ಅಧಿಕಾರಿಗಳು.

ಸುಮಾರು ಮೂರು ಕಿ.ಮೀ. ನಷ್ಟು ಮೆರವಣಿಗೆಯಲ್ಲಿ ಪಾಲ್ಗೊಂಡ ಶಾಲಾ ಮಕ್ಕಳು ಬಾರಿಸು ಕನ್ನಡ ಡಿಂಡಿಮವಾ ಹಾಗೂ ಗೊಂಬೆ ಹೇಳುತ್ತೈತೆ ಹಾಡಿಗೆ ಬಿಟ್ಟುಬಿಡದೆ ಹೇಜ್ಜೆ ಹಾಕಿದರು. ಮಕ್ಕಳ ಕುಣಿತ ನೋಡುತ್ತಾ ಅಧಿಕಾರಿಗಳು ನಡೆಯುತ್ತಲ್ಲೆ ಹೇಜ್ಜೆ ಹಾಕುತ್ತಿದ್ದರು. ಸ್ವಾಮಿ ವಿವೇಕಾನಂದರ ವೃತ್ತದಲ್ಲಿ ಡೋಳ್ಳು ಹಾಕಿಕೊಂಡು  ಸಂಭ್ರಮಿಸಿದ ತಾಲೂಕಿನ ಅಧಿಕಾರಿಗಳು ಹರ್ಷ ಕನ್ನಡಾಂಬೆಗೆ ಕೇಳುವಂತಿತ್ತು. ಬಸ್ ನಿಲ್ದಾಣದ ಮುಂಬಾಗದಲ್ಲಿ ಪರಮಾತ್ಮನ ವೇಷದಾರಿ ಮಗು ಬಂದು ನೃತ್ಯಮಾಡಿದು ಜನ-ಮನ ಸೆಳೆಯುವಂತಿತ್ತು. ಮೆರವಣಿಗೆಯಲ್ಲಿ ಡೋಳ್ಳು ಕುಣಿತ, ಚಿಟ್ಟ ಹಲಗೆ ವಾದ್ಯ, ಜಿಲ್ಲೆಯ ಪ್ರಸಿದ್ದ ಹಲಗೆ ಕಲಾ ತಂಡಗಳು ಮೆರವಣಿಗೆಯಲ್ಲಿ  ಪಾಲ್ಗೊಂಡಿದ್ದವು. ಸಿಂದಗಿ ನಗರದಲ್ಲಿ ಮಂಗಳವಾರದಂದು ಕನ್ನಡ ರಾಜ್ಯೋತ್ಸವದ ಸಡಗರ ಮುಗಿಲು ಮುಟ್ಟಿತ್ತು. ತಾಲೂಕು ಆಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು, ಕಾರ್ಯನಿರತ ಪತ್ರಕರ್ತರ ಸಂಘ, ಕನ್ನಡ ಮನಸುಗಳ ಸಹಯೋಗದೊಂದಿಗೆ ಎಂಟು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರಗಳ ಮೆರವಣಿಗೆ ಮಾಡಲಾಯಿತು. ಈ ಬಾರಿಯ ರಾಜ್ಯೋತ್ಸವ ಆಚರಣೆಯಲ್ಲಿ ಇದು ವಿಶೇಷವಾಗಿ ಗಮನ ಸೆಳೆಯಿತು.

ಮೊದಲು ಕಸಪಾ ಅಧ್ಯಕ್ಷ ರಾಜಶೇಖರ ಕೂಚಬಾಳ ಕನ್ನಡ ಧ್ವಜಾರೋಹಣ ನಡೆಸಿದರು. ನಗರದ ತಾಲೂಕು ಆಡಳಿತದಿಂದ ಆರಂಭವಾದ ಮೆರವಣಿಗೆ ಕನ್ನಡಾಂಬೆಯ ವೃತ್ತ, ಬಸವೇಶ್ವರ ವೃತ್ತ, ಸ್ವಾಮಿ ವಿವೇಕಾನಂದ ವೃತ್ತದಿಂದ ಪೂಜ್ಯ ಲಿಂಗೈಕ್ಯ ತೋಂಟದ ಸಿದ್ದಲಿಂಗ ಶ್ರೀ ರಸ್ತೆ ಮುಖಾಂತರ ಡಾ|| ಬಿ.ಆರ್. ಅಂಬೇಡ್ಕರ್ ವೃತ್ತ ಸೇರಿದಂತೆ ನಗರದ ವಿವಿಧ ವೃತ್ತಗಳ ಮಾರ್ಗವಾಗಿ ಬಸವ ಮಂಟಪಕ್ಕೆ ರೂಪಕಗಳ ಜೊತೆಗೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು. ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ಶಿಕ್ಷಕರು, ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ನಿಂಗಣ್ಣ ಬಿರಾದಾರ, ತಾ.ಪಂ ನಿರ್ವಾಹಕ ಅಧಿಕಾರಿ ಬಾಬು ರಾಠೋಡ, ಸಿಪಿಐ ರವಿ ಉಕ್ಕುಂದ, ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ, ಕ್ಷೇತ್ರ ಶಿಕ್ಷಣಾಧಿಕಾರಿ ಹಣಮಂತ್ರಾಯ ಹರನಾಳ ಪುರಸಭೆ ಮುಖ್ಯಾಧಿಕಾರಿ ರಾಜಶ್ರೀ ತುಂಗಳ ಗ್ರೇಡ್ ೨ ತಹಶೀಲ್ದಾರ್ ಪ್ರಕಾಶ ಸಿಂದಗಿ ವೇದಿಕೆ ಮೇಲಿದ್ದರು.
ಇದೇ ಸಂದರ್ಭದಲ್ಲಿ ಸುರೇಶ ಮ್ಯಾಗೇರಿ, ಆಯ್.ಎ.ಮಕಂದಾರ, ಜಿ.ಪಿ ನಂದಿಮಠ, ಶೈಲಜಾ ಸ್ಥಾವರಮಠ, ಮಾಳು ಹೊಸುರ, ಅಬಕಾರಿ ನಿರೀಕ್ಷಕರಾದ ಆರತಿ ಖೈನೂರ, ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಕುಲಕರ್ಣಿ, ಪಿಎಸ್‌ಐ ಸೊಮೇಶ ಗೆಜ್ಜಿ,

vegadhut@gmail.com.

Leave a comment