Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
Uncategorized

ಸಿರಿಧಾನ್ಯ ಆಹಾರ ಸೇವೆನೆಯಿಂದ ಅಪೌಷ್ಟಿಕತೆ ನಿವಾರಣೆ: ಜಿ.ಜಿ.ಕುರವತ್ತಿ 

ವಿಜಯಪುರ : ಸಿರಿಧಾನ್ಯಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಆಪೌಷ್ಟಿಕತೆಯನ್ನು ಹೋಗಲಾಡಿಸಬಹುದು ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಧೀಶರು ಮತ್ತು ಜಿಲ್ಲಾ ಕಾನೂನ ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ ಜಿ ಕುರವತ್ತಿ ಅವರು ಹೇಳಿದರು. ಕೇಂದ್ರ ಸರಕಾರದ ವಾರ್ತಾ ಮತ್ತು ಪ್ರಸಾರ…
ವಿಜಯಪುರ : ಸಿರಿಧಾನ್ಯಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಆಪೌಷ್ಟಿಕತೆಯನ್ನು ಹೋಗಲಾಡಿಸಬಹುದು ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಧೀಶರು ಮತ್ತು ಜಿಲ್ಲಾ ಕಾನೂನ ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ ಜಿ ಕುರವತ್ತಿ ಅವರು ಹೇಳಿದರು.
ಕೇಂದ್ರ ಸರಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಇಲಾಖೆ, ವಿಜಯಪುರ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನೆಹರೂ ಯುವ ಕೇಂದ್ರ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೆ.28ರಂದು ನಡೆದ ರಾಷ್ಟ್ರೀಯ ಪೋಷಣ ಮಾಸಾಚರಣೆ ಹಾಗೂ ಪ್ರ‍್ರಧಾನ ಮಂತ್ರಿ ಮಾತೃವಂದನಾ ಸಪ್ತಾಹ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಿರಿಧಾನ್ಯಗಳಲ್ಲಿ ಹೆಚ್ಚಿನ ಪೌಷ್ಟಿಕಾಂಶಗಳಿದ್ದು ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳು ಇದನ್ನು ಸೇವಿಸುವ ಮೂಲಕ ಕುಪೋಷಣದಿಂದ ಹೊರಬರಬೇಕು ಎಂದು ತಿಳಿಸಿದರು. 1925ರಲ್ಲಿ ಅಮೇರಿಕದಲ್ಲಿ ಪೋಷಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಭಾರತದಲ್ಲಿ 1982ರಲ್ಲಿ ಪೋಷಣ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು ಎಂದರು. ಇತ್ತೀಚಿನ ದಿನಗಳಲ್ಲಿ ಪೌಷ್ಟಿಕಾಂಶದ ಕೊರತೆಯಿಂದ ಮಕ್ಕಳ ಬೆಳವಣಿಗೆಯಲ್ಲಿ ಕುಂಠಿತವಾಗುತ್ತಿದೆ. ಆದ್ದರಿಂದ ಬೌದ್ಧಿಕÀ ಮತ್ತು ಮಾನಸಿಕ ಬೆಳವಣಿಗೆಗೆ ಸಮತೋಲಿತ ಆಹಾರ ಸೇವಿಸುವ ಮೂಲಕ ಉತ್ತಮ್ಮ ಆರೋಗ್ಯ ಪ್ರಾಪ್ತ್ತಿ ಹೊಂದಬೇಕು ಎಂದರು.
ಘನ ಉಪಸ್ಥಿತಿ ವಹಿಸಿದ್ದ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ವೆಂಕಣ್ಣ ಬಿ ಹೊಸಮನಿ ಅವರು ಮಾತನಾಡಿ, ಆರೋಗ್ಯವಂತ ತಾಯಿ ಮತ್ತು ಆರೋಗ್ಯವಂತ ಮಗುವಿನಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿದ್ದ ಅಪರ ಜಿಲ್ಲಾಧಿಕಾರಿಗಳಾದ ರಮೇಶ ಕಳಸದ ಅವರು ಮಾತನಾಡಿ, ಪ್ರತಿ ವರ್ಷ ಸರಾಸರಿ ಶೇ.2ರಷ್ಟು ಪ್ರಮಾಣದಲ್ಲಿ ಕುಂಠಿತ ಬೆಳವಣೆಗೆ, ರಕ್ತಹೀನತೆಯನ್ನು ಕಡಿಮೆ ಮಾಡಬೇಕಿದೆ. ಈ ಕಾರ್ಯಕ್ಕೆ ಅಧಿಕಾರಿ ವರ್ಗ ಮತ್ತು ಜನಸಾಮಾನ್ಯರು ಸಹಕರಿಸÀಬೇಕು ಎಂದರು.
ಬಿಎಲ್‌ಡಿಇ ವಿಶ್ವವಿದ್ಯಾಲಯದ ಸಮುದಾಯ ಆರೋಗ್ಯ ವಿಭಾಗ ಕೇಂದ್ರದ ಪ್ರಾಧ್ಯಾಪಕರಾದ ಡಾ.ಶೈಲಜಾ ಪಾಟೀಲ ಅವರು ವಿಶೇಷ ಉಪನ್ಯಾಸ ನೀಡಿ, ವೈವಿಧ್ಯಮಯ ಮತ್ತು ಸಾಕಷ್ಟು ಪ್ರಮಾಣದ ಆಹಾರ ಸೇವನೆ ಇಂದಿನ ಅಗತ್ಯತೆಯಾಗಿದ್ದು, ಸ್ಥಳೀಯ ಆಹಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಹಣ್ಣುಗಳ ಸೇವನೆ ಕಡಿಮೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಉತ್ತಮ ಆರೋಗ್ಯಕ್ಕೆ ತರಕಾರಿ ಮತ್ತು ಹಣ್ಣುಗಳನ್ನು ಹೆಚ್ಚಾಗಿ ಸೇವಿಸಬೇಕು ಎಂದರು. ಶಿಕ್ಷಣದ ಕೊರತೆಯೂ ಆಪೌಷ್ಟಿಕತೆ ಹೆಚ್ಚಾಗಲು ಕಾರಣವಾಗಿದೆ ಎಂದ ಅವರು, ಇದರಿಂದಾಗಿ ಹೆಣ್ಣು ಮಕ್ಕಳು ಶಾಲೆಯನ್ನು ತೊರೆಯುತ್ತಿರುವುದು ಮೂಲ ಕಾರಣವಾಗಿದೆ ಎಂದರು. ಇದಕ್ಕೆ ಸರ್ಕಾರ ಕಾರಣವಲ್ಲ; ಬದಲಾಗಿ ಇದಕ್ಕೆ ಸಮಾಜವೇ ಕಾರಣವಾಗಿದೆ. ಆದ್ದರಿಂದ ಹೆಣ್ಣು ಮಕ್ಕಳನ್ನು ಶಿಕ್ಷಿತರನ್ನಾಗಿಸಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಪೌಷ್ಟಿಕ ಆಹಾರ ತಯಾರಿಕಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಸುರೇಶ್ ಚವ್ಹಾಣ್, ಜಿಲ್ಲಾ ಪಂಚಾಯತಿಯ ನಿಂಗಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿಗಳಾದ ಗೀತಾ ಗುತ್ತರಗಿಮಠ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಎಸ್ ಸಿ ಮ್ಯಾಗೇರಿ, ದೀಪಾಕ್ಷಿ ಜಾನಕಿ, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳಾದ ರಾಹುಲ್ ಡೋಂಗ್ರೆ ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ
ಕೆ ಕೆ ಚಾವ್ಹಾಣ್ ಅವರು ಸ್ವಾಗತಿಸಿದರು. ಭಾರತಿ ಪಾಟೀಲ ನಿರೂಪಿಸಿದರು. ಸಿ ಕೆ ಸುರೇಶ್ ವಂದಿಸಿದರು. ಜೈ ಕಿಸಾನ ಕಲಾ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

vegadhut@gmail.com.

Leave a comment