ಆಲಮೇಲ: ದೇವಣಗಾಂವ ಗ್ರಾಮದ ಶತಾಯುಷಿ ಮತದಾರ ತುಳಜಾಬಾಯಿ ಸೇವುಸಿಂಗ್ ರಜಪುತ ಅವರಿಗೆ ತಾಲೂಕಾ ಆಡಳಿತದ ವತಿಯಿಂದ ಆಲಮೇಲ ತಹಶೀಲ್ದಾರ್ ಸುರೇಶ ಚವಲರ ಸನ್ಮಾನಿಸಿ, ಅಭಿನಂದನಾ ಪತ್ರ ನೀಡಿ ಗೌರವಿಸಿದರು. ಹಿರಿಯರು ನಮ್ಮ ಸಮಾಜದ ಆಸ್ತಿ, ಅವರನ್ನು ಗೌರವಿಸುವ ಪೂಜಿಸುವ ಸಂಪ್ರದಾಯ ನಮ್ಮದು …
vegadhut@gmail.com.
-
-
ಸಿಂದಗಿ: ಪಟ್ಟಣದ ಅಲ್ಲಾಪೂರ ಮನೆತನದ ಹಿರಿಯ ಜೀವ ಎಸ್.ಡಿ.ಅಲ್ಲಾಪೂರ(೮೯) ಅವರು ವಯೋ ಸಹಜದಿಂದ ರವಿವಾರ ನಿಧನರಾಗಿದ್ದಾರೆ. ಮೃತರು ಪತ್ನಿ, ಲಿಂಬೆ ಅಬಿವೃದ್ಧಿ ಮಂಡಳಿ ಮಾಜಿ ಆದ್ಯಕ್ಷ ಅಶೋಕ ಅಲ್ಲಾಪೂರ ಸೇರಿದಂತೆ ೩ ಜನಗಂಡು ಹಾಗೂ ಓರ್ವ ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೃತರು …
-
ಗಾಂಧಿ ಜಯಂತಿ ಹಿನ್ನೆಲೆ: ಜಿಲ್ಲಾಧಿಕಾರಿಗಳು, ಜಿಪಂ ಸಿಇಓ ಸಮ್ಮುಖದಲ್ಲಿ ಅಧಿಕಾರಿಗಳಿಂದ ಶ್ರಮದಾನ ವಿಶೇಷ ಕಾರ್ಯಕ್ರಮ ವಿಜಯಪುರ : ಅಕ್ಟೋಬರ್ 2 ಗಾಂಧೀ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಅಕ್ಟೋಬರ್ 1ರಂದು ನಗರದ ಶಿವಗಿರಿಯ ಮಹಾತ್ಮ ಗಾಂಧೀಜಿ ಕಾಲೊನಿಯಲ್ಲಿ ವಿಶೇಷ ಸ್ವಚ್ಛತಾ ಕಾರ್ಯಕ್ರಮ …
-
ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ ಅವರಿಂದ ಅಧಿಕಾರಿಗಳಿಗೆ ಸೂಚನೆ ವಿಜಯಪುರ : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 1ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಡಿ ಪ್ರಾಧಿಕಾರದ ಸಭೆ ನಡೆಯಿತು. ಈ …
-
ವಿಜಯಪುರ: ಜಿಲ್ಲೆಯಲ್ಲಿ ನಡೆಯಲಿರುವ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ನೆರವೇರಿಸಿದರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದಲ್ಲಿ ನಡೆಯಲಿರುವ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಿದರು. ನಗರದಲ್ಲಿ ಶ್ರೀ ಸಿದ್ದೇಶ್ವರ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ ಲೋಕಾರ್ಪಣೆ ಹಾಗೂ ವಿವಿಧ ಅಭಿವದ್ಧಿ ಕಾಮಗಾರಿಗಳ ಚಾಲನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿ, ಸಮ್ಮೇಳನಕ್ಕೆ ಶುಭಾಶಯ ಕೋರಿದರು. ಅಲ್ಲದೇ ಸಂಘದ ಸದಸ್ಯರು ಸಲ್ಲಿಸಿದ ಮನವಿಗೆ ಸ್ಪಂದಿಸುವುದಾಗಿ ತಿಳಿಸಿದರು. ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಎಸ್ಪಿ ಎಚ್.ಡಿ. ಆನಂದಕುಮಾರ, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ಉಪಾಧ್ಯಕ್ಷರಾದ ಪುಂಡಲೀಕ ಬಾಳೋಜಿ, ಭವಾನಿಸಿಂಗ್ ಠಾಕೂರ, ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಉಪಾಧ್ಯಕ್ಷ ಇಂದುಶೇಖರ ಮಣೂರ, ಕಾರ್ಯದರ್ಶಿ ಅವಿನಾಶ ಬಿದರಿ ಮತ್ತಿತರರಿದ್ದರು.