Home News ನ.6ರಂದು ವಿಜಯಪುರದಲ್ಲಿ 52 ಪರೀಕ್ಷಾ ಕೇಂದ್ರಗಳಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ

ನ.6ರಂದು ವಿಜಯಪುರದಲ್ಲಿ 52 ಪರೀಕ್ಷಾ ಕೇಂದ್ರಗಳಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ

by vegadhut@gmail.com.
0 comments


ವಿಜಯಪುರ : ಇದೇ ನವೆಂಬರ್ ೬ ರಂದು ನಡೆಯಲಿರುವ (ಟಿಇಟಿ) ಶಿಕ್ಷಕರ ಅರ್ಹತಾ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ಅಡೆ-ತಡೆ ಉಂಟಾಗದಂತೆ ಗಮನವಹಿಸಿ, ಅಭ್ಯರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ, ವ್ಯವಸ್ಥಿತವಾಗಿ ಪರೀಕ್ಷೆಗಳು ನಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಜರುಗಿದ ಟಿಇಟಿ-2022 ರ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪರೀಕ್ಷಾರ್ಥಿಗಳಿಗೆ ನೀರು, ಬೆಳಕು, ಶೌಚಾಲಯ ಸೇರಿದಂತೆ ಎಲ್ಲ ಮೂಲಭೂತ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಯಾವುದೇ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ, ಪ್ರತಿ ಕೇಂದ್ರದಲ್ಲಿ ಓರ್ವ ಆರೋಗ್ಯ ಸಹಾಯಕರನ್ನು ನಿಯೋಜಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷಾ ಕೊಠಡಿಗಳಲ್ಲಿ ಸ್ವಚ್ಛತೆಯ ಕುರಿತು ಪರಿಶೀಲನೆ ನಡೆಸಬೇಕು. ಹೆಣ್ಣು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಅವರಿಗೆ ಪ್ರತ್ಯೇಕ ತಪಾಸಣಾ ಕೊಠಡಿಗಳ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ ಅವರು ಮಾತನಾಡಿ, ಪರೀಕ್ಷಾ ಅಕ್ರಮ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಅಕ್ರಮಕ್ಕೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಎಲ್ಲ ಅಗತ್ಯ ಕ್ರಮಕೈಗೊಂಡಿದ್ದು, ಅಕ್ರಮ ರಹಿತ ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಡಿಡಿಪಿಐ ಶಿರಹಟ್ಟಿ ಮಠ ಸಭೆಗೆ ಮಾಹಿತಿ ನೀಡಿ, ಒಟ್ಟು 52 ಪರೀಕ್ಷಾ ಕೇಂದ್ರಗಳಲ್ಲಿ ಟಿಇಟಿ ಪರೀಕ್ಷೆಗಳು ಜರುಗಲಿದ್ದು,ಇದರಲ್ಲಿ 5 ಸರ್ಕಾರಿ 24, ಅನುದಾನಿತ, 23, ಅನುದಾನ ರಹಿತ ಪರೀಕ್ಷಾ ಕೇಂದ್ರಗಳಾಗಿವೆ. 41 ಪ್ರಥಮ ಅಧಿವೇಶನ ಹೊಂದಿದ ಪರೀಕ್ಷಾ ಕೇಂದ್ರಗಳಿದ್ದು, ಪ್ರಥಮ ಅಧಿವೇಶನ ಹೊಂದಿದ 107 60 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ದ್ವೀತಿಯ ಅಧಿವೇಶನ ಹೊಂದಿದ 52 ಪರೀಕ್ಷಾ ಕೇಂದ್ರಗಳಲ್ಲಿ 13407 ಅಭ್ಯರ್ಥಿಗಳು ಹಾಜರಾಗಲಿದ್ದಾರೆ. 9 ಮಾರ್ಗಾಧಿಕಾರಿಗಳು, 52 ಮುಖ್ಯ ಅಧೀಕ್ಷಕರು, 52 ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು, 1 ವೀಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ.ವಿಜಯಕುಮಾರ ಆಜೂರ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ : ಇದೇ ನವೆಂಬರ್ 6 ರಂದು ಶಿಕ್ಷಕರ ಅರ್ಹತಾ (ಟಿಇಟಿ) ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆಗಳು ಸುವ್ಯವಸ್ಥಿತವಾಗಿ ನಡೆಯಲು ಮುಂಜಾಗ್ರತಾ ಕ್ರಮವಾಗಿ 52 ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯ ಪ್ರದೇಶದಲ್ಲಿ ಅಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ.

banner

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

u00a92022u00a0Soledad.u00a0All Right Reserved. Designed and Developed byu00a0Penci Design.

Latest news