
ಸಿಂದಗಿ: ನ.8 ಮಂಗಳವಾರದಂದು ಮದ್ಯಾಹ್ನ 3 ಗಂಟೆಗೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣಸಿಂಗ್ ಬ್ರಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ಸಿಂದಗಿ ನಗರಕ್ಕೆ ಆಗಮಿಸಲಿದ್ದಾರೆ. ತದನಿಮಿತ್ಯವಾಗಿ ನ.5 ನಾಳೆ ಶನಿವಾರದಂದು ಮದ್ಯಾಹ್ನ 3ಗಂಟೆಗೆ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಮಂಡಲ ಅಧ್ಯಕ್ಷ ಈರಣ್ಣ ರಾವೂರ ತಿಳಿಸಿದ್ದಾರೆ.
ಈ ವೇಳೆ ಶಾಸಕ ರಮೇಶ ಭೂಸನೂರ, ಬೆಳಗಾವಿ ವಿಭಾಗದ ಪ್ರಭಾರಿ ಚಂದ್ರಶೇಖರ ಕವಟಗಿ, ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರುದ್ರ ಬಾಗಲಕೋಟ, ಮಲ್ಲಿಕಾರ್ಜುನ ಜೋಗೂರ, ಬಸವರಾಜ ಬಿರಾದಾರ ಹಾಗೂ ಮಂಡಲ ಪ್ರಭಾರಿ ಚಿದಾನಂದ ಚಲವಾದಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಪಕ್ಷದ ಎಲ್ಲಾ ಪದಾಧಿಕಾರಿಗಳು, ಜನಪ್ರತಿನಿಧಿಗಳು, ನಾಮ ನಿರ್ದೇಶಿತ ಸದಸ್ಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮಂಡಲ ಅಧ್ಯಕ್ಷ ಈರಣ್ಣ ರಾವುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

