
ಸಿಂದಗಿ: ಕಾಲುಬಾಯಿ ಬೇನೆ ರೋಗ ವೈರಾಣುವಿನಿಂದ ಬರುವಂತಹ ಕಾಯಿಲೆಯಾಗಿದೆ. ಇದರಿಂದ ಜಾನುವಾರುಗಳಿಗೆ ಹೆಚ್ಚಿನ ಜ್ವರ ಕಾಣಿಸಿಕೊಂಡ ಕಾಲು ಮತ್ತು ಬಾಯಿಯಲ್ಲಿ ಹುಣ್ಣಾಗಿ ಜೋಲ್ಲು ಸುರಿಸುತ್ತವೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.
ಜಾನುವಾರುಗಳಿಗೆ ಲಸಿಕೆ ವಿತರಣೆ ಮಾಡಿ ಮಾತನಾಡಿದ ಅವರು, . ಜಾನುವಾರುಗಳಲ್ಲಿ ಹಾಲಿನ ಇಳುವರಿ ಕಡಿಮೆಯಾಗಿ ಜಾನುವಾರುಗಳ ಉತ್ಪಾದನೆ ಹಾಗೂ ಉತ್ಪಾದಕತೆ ಕಡಿಮೆಯಾಗುತ್ತದೆ. ರೋಗ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲ ರೈತ ಬಾಂಧವರು ಲಸಿಕೆ ಹಾಕಿಸುವಂತೆ ಮನವಿ ಮಾಡಿಕೊಂಡರು.
ಇದೇ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಡಾ.ಎಂ.ಎಸ್.ಗAಗನಳ್ಳಿ ಮಾತನಾಡಿ, ನ.7 ರಿಂದ ಡಿ.7ರವರೆಗೆ ತಾಲೂಕಿನಾದ್ಯಂತ ಕಾಲುಬಾಯಿ ರೋಗಕ್ಕೆ ಲಸಿಕೆ ಹಾಕುವ ಕಾರ್ಯಕ್ರಮವಿದ್ದು, ಲಸಿಕೆ ಹಾಕಲು ತಂಡಗಳನ್ನು ರಚಿಸಿದ್ದು, ರೈತರ ಮನೆ ಬಾಗಿಲಿಗೆ ಹೋಗಿ ಉಚಿತವಾಗಿ ಲಸಿಕೆ ಹಾಕಲಾಗುತ್ತದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಮತ್ತು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶು ವೈಧ್ಯಕೀಯ ಆಸ್ಪತ್ರೆೆ ಅಥವಾ ಪಶುಪಾಲಕರ ಸಹಾಯವಾಣಿ ಸಂಖ್ಯೆ 8277100200 ಗೆ ಸಂಪರ್ಕಿಸಿರಿ ಎಂದರು.
ಈ ವೇಳೆ ಮುಖ್ಯ ಪಶುವೈದ್ಯಾಧಿಕಾರಿ ಡಾ. ಮಾರುತಿ ತಡ್ಲಗಿ, ಸಿಬ್ಬಂದಿ ಶುಭಾಷ ಬಗಲಿ, ಯಮನಪ್ಪ ಚೌದ್ರಿ, ಪರಶುರಾಮ ಬಿಸನಾಳ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
