ಸಿಂದಗಿ: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ಅಡಿಯಲ್ಲಿ ನಡೆಯುವ ಬಿ.ಎಸ್.ಡಬ್ಲ್ಯೂ ಕೋರ್ಸಿನ 2021-22 ಮತ್ತು ಪ್ರಸಕ್ತ ಸಾಲಿನ ಪರೀಕ್ಷೆಯಲ್ಲಿ ಸಿಂದಗಿಯ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯವು, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಜರುಗಿದ 13 ಮತ್ತು 14ನೆಯ ಘಟಿಕೋತ್ಸವದಲ್ಲಿ ಬಿ.ಎಸ್.ಡಬ್ಲ್ಯೂ ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ ಪಡೆದ ಪ್ರಯುಕ್ತ ಸಮಾರಂಭದಲ್ಲಿ ಸುಧಾ ಹರವಾಳ ಮತ್ತು ನಜ್ಮಾ ಮಣೂರ ಚಿನ್ನದ ಪದಕವನ್ನು ಪಡೆದುಕೊಂಡು ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ವಿದ್ಯಾರ್ಥಿನಿಯ ನಿರಂತರ ಪರಿಶ್ರಮ, ಕಾಲೇಜಿನ ಉಪನ್ಯಾಸಕರ ಅತ್ಯುತ್ತಮ ಭೋಧನೆ ಪಾಲಕರ ಪ್ರೋತ್ಸಾಹಯಿಂದ ಈ ಚಿನ್ನದ ಪದಕ ಪಡೆದುಕೊಳ್ಳಲು ಸಾಧ್ಯವಾಗಿದೆ ಎಂದು ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಪೂಜ್ಯ ಶ್ರೀ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಪ್ರತಿಕ್ರಿಯಿಸಿ, ವಿದ್ಯಾರ್ಥಿಗೆ ಶುಭ ಹಾರೈಸಿದ್ದಾರೆ.
ವಿದ್ಯಾರ್ಥಿನಿಯರ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರು, ಪ್ರಾಚಾರ್ಯರಾದ ಶ್ರೀ ಎಸ್.ಎಂ.ಪೂಜಾರಿ, ಉಪನ್ಯಾಸಕರಾದ ಶ್ರೀ.ಮಹಾಂತೇಶ ನೂಲಾನವರ ಸೇರಿದಂತೆ ಮಹಾವಿದ್ಯಾಲಯದ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿನಿಯರಿಗೆ ಅಭಿನಂದನೆ ಕೋರಿ ಹರ್ಷ ವ್ಯಕ್ತಪಡಿಸಿದ್ದಾರೆ.