
ಸಿಂದಗಿ : ಗೃಹಲಕ್ಷ್ಮಿ ಯೋಜನೆ ಜಾರಿಗೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಅಶೋಕ ಮನಗೂಳಿ ಹೇಳಿದರು. ಮಂಗಳವಾರದಂದು ಪಟ್ಟಣದ 8ನೇ ವಾರ್ಡಿನಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಿ ಮಾತನಾಡಿದ ಅವರು ಜನ ರಾಜಕೀಯ ಪಕ್ಷಗಳ ಭರವಸೆ ಮತ್ತು ಆಶ್ವಾಸನೆಗಳಿಗೆ ಬೇಸತ್ತು ಹೋಗಿದ್ದಾರೆ. ಬಿಜೆಪಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಬೆಲೆ ಏರಿಕೆ ಬಿಸಿಗೆ ರೋಷಿ ಹೋಗಿದ್ದಾರೆ. ನಮ್ಮ ಪಕ್ಷ ಭರವಸೆ ನೀಡುವ ಪಕ್ಷ ಅಲ್ಲ ಕೊಟ್ಟ ಭರವಸೆಯನ್ನು ಕಾರ್ಯರೂಪಕ್ಕೆ ತರುವ ಪಕ್ಷ ಗೃಹ ಲಕ್ಷ್ಮಿ ಯೋಜನೆಯ ಮೂಲಕ ರಾಜ್ಯದ ಪ್ರತಿಯೊಂದು ಕುಟುಂಬಕ್ಕೆ ನಿರ್ವಹಣೆಗಾಗಿ ಪ್ರತಿ ತಿಂಗಳು 2 ಸಾವಿರ ರೂಪಾಯಿ ಜಮೆ ಮಾಡಲಾಗುವುದು. ಪ್ರತಿ ಕುಟುಂಬಕ್ಕೆ ಅನ್ನ ಭಾಗ್ಯ ಯೋಜನೆಯಲ್ಲಿ ಮತ್ತೆ 10 ಹತ್ತು ಕೆಜಿ ಅಕ್ಕಿ ನೀಡುವುದರ ಜೊತೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಎಂದು ಹೇಳಿದರು.
ಮತಕ್ಷೇತ್ರದ ವ್ಯಾಪ್ತಿಗೆ ಬರುವ 271 ಭೂತಗಳಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರು ಮತ್ತು ಮುಖಂಡರು ಪ್ರತಿ ಕುಟುಂಬಕ್ಕೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿ ಗೃಹ ಲಕ್ಷ್ಮಿ ಯೋಜನೆಯ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಹೇಳಿದರು. ಈ ವೇಳೆ ಕಾಂಗ್ರೆಸ್ ಮುಖಂಡರಾದ ರಾಜಶೇಖರ ಸಂಗಮ , ಸಿದ್ದು ಮಲ್ಲೇದ, ಇಕ್ಬಾಲಸಾಬ್ ತಲಕಾರಿ , ಮಂಜುನಾಥ ಬಿಜಾಪುರ ಮತ್ತಿತರರಿದ್ದರು.