20

ಸಿಂದಗಿ: ಪಟ್ಟಣದ ಹೆಚ್.ಜಿ.ಪದವಿಪೂರ್ವ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕ ಮಲ್ಲಿಕಾರ್ಜುನ ಶಿವಶರಣಪ್ಪ ಕಿರಣಗಿ (60) ಅನಾರೋಗ್ಯದಿಂದ ಬುಧವಾರ ನಿಧನರಾದರು. ಮೃತರು ಪತ್ನಿ, ಓರ್ವ ಮಗ ಮಗಳನ್ನು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸ್ವ ಗ್ರಾಮ ಹೊನ್ನಾಳ್ಳಿಯಲ್ಲಿ ನೆರವೇರಿತು.
ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಅಧ್ಯಕ್ಷ ಅಶೋಕ ಮನಗೂಳಿ ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರು ಸಂತಾಪ ಸೂಚಿಸಿದ್ದಾರೆ.