ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ರಜೆ ಮುಂದುವರೆಸಿ ಆದೇಶ ಹೊರಡಿಸಲಾಗಿದೆ
ವಿಜಯಪುರ: ಇಂದು ಬೆಳಗ್ಗೆ ಜಿಲ್ಲಾಧಿಕಾರಿಗಳು ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಒಂದು ದಿನದ ರಜೆ ಘೋಷಿಸಿ ಆದೇಶ ಹೊರಡಿಸಿದ್ದರು.
ಆದರೆ ಇಂದು ಸಂಪೂರ್ಣವಾಗಿ ಮಳೆ ಸುರಿದು ಇನ್ನು ಮೋಡ ಕವಿದ ವಾತಾವರಣ ಇರುವುದರಿಂದ, ದಿನಾಂಕ 28 ರಂದು ಜಿಲ್ಲೆಯ ಎಲ್ಲ ಅಂಗನವಾಡಿಗಳು, ಸರ್ಕಾರಿ ಹಾಗೂ ಖಾಸಗಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಡ ಶಾಲೆ, ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಎಲ್ಲ ಪದವಿ ಕಾಲೇಜು, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಕಾಲೇಜು, ಮೆಡಿಕಲ್ ಕಾಲೇಜು, ಡಿಪ್ಲೊಮಾ, ಐ.ಟಿ.ಐ ಕಾಲೇಜುಗಳಿಗೆ ರಜೆ ಇರುವುದಿಲ್ಲವೆಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

