ಮೋರಟಗಿ ಸರ್ವ ಸದಸ್ಯರ ಬೆಂಬಲದೊಂದಿಗೆ ಅವಿರೋಧವಾಗಿ ಆಯ್ಕೆಯಾದ ಗೌರಮ್ಮ ಮತ್ತು ದೌಲಾಬಿ
ಆಲಮೇಲ: ತಾಲ್ಲೂಕಿನ ಮೋರಟಗಿ ಗ್ರಾಮ ಪಂಚಾಯತ ಗೆ ಚುನಾವಣೆ ಪ್ರಕ್ರಿಯೆ ನಡೆದಿದ್ದು ತಾಲೂಕಿನ ವಲಯ ಅರಣ್ಯ ಅಧಿಕಾರಿ ಆರ್.ಎಸ್.ಬಿರಾದಾರ ಗೊತ್ತು ಪಡಿಸಿದ ಚುನಾವಣಾಧಿಕಾರಿ ನಡೆಸಿಕೊಟ್ಟರು.
ಅಧ್ಯಕ್ಷ ಸ್ಥಾನಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಏಕಮಾತ್ರ ನಾಮಪತ್ರಗಳು ಸಲ್ಲಿಕೆಯಾಗಿದ್ದು. ಅಧ್ಯಕ್ಷ ಸ್ಥಾನಕ್ಕೆ ಗೌರಮ್ಮ ಅಮೋಘಸಿದ್ದ ನಡುವಿನಕೇರಿ, ಉಪಾಧ್ಯಕ್ಷ ಸ್ಥಾನಕ್ಕೆ ದೌಲಾಬಿ. ಯಾಕುಬಸಾಬ ಮುಲ್ಲಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಆರ್.ಎಸ್.ಬಿರಾದಾರ ಚುನಾವಣಾ ಫಲಿತಾಂಶ ಘೋಷಣೆ ಮಾಡಿದರು.
ನಂತರ ಮಾತನಾಡಿದ ಮೋರಟಗಿ ಪಂಚಾಯತ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಗೌರಮ್ಮ ಊರಿನ ಹಿರಿಯರು ಹಾಗೂ ಸರ್ವ ಸದಸ್ಯರು ಬಹುಮತದೊಂದಿಗೆ ಆಯ್ಕೆಮಾಡಿ ಊರಿನ ಸೇವೆಯ ಜವಾಬ್ದಾರಿ ನೀಡಿದ ಎಲ್ಲರಿಗೂ ಧನ್ಯವಾದಗಳು ಹೇಳಿದರು.
