Home News ನಟ ಉಪೇಂದ್ರ ಹೇಳಿಕೆಗೆ ಸಚಿವ ಎಚ್.ಸಿ.ಮಹಾದೇವಪ್ಪ ಖಂಡನೆ

ನಟ ಉಪೇಂದ್ರ ಹೇಳಿಕೆಗೆ ಸಚಿವ ಎಚ್.ಸಿ.ಮಹಾದೇವಪ್ಪ ಖಂಡನೆ

by vegadhut@gmail.com.
0 comments

ನಟ ಉಪೇಂದ್ರ ಇತ್ತೀಚಿಗೆ ನೀಡಿದ ಹೊಲಗೇರಿ ಎಂಬ ಪದದ ವಿವಾದಕ್ಕೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರವಣಿಗೆ ಮುಖಾಂತರ ಖಂಡನೆ ಮಾಡಿದ್ದಾರೆ.

ಸಾಮಾಜಿಕ ಜಾಲತಣ : ಹೇಳಿಕೆ  ಕುರಿತು ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಬರೆದುಕೊಂಡಿದ್ದಾರೆ. ಉಪೇಂದ್ರ ಅವರು ಒಬ್ಬ ಖ್ಯಾತ ನಟ, ನಿರ್ಮಾಪಕ ಮತ್ತು ಒಂದು ನಿರ್ದಿಷ್ಟ ರಾಜಕೀಯ ಪಕ್ಷದ ಮೂಲಕ ಸಾರ್ವಜನಿಕ ಜೀವನದಲ್ಲಿ ಇರಲು ಬಯಸುತ್ತಿರುವ ವ್ಯಕ್ತಿ.

ಇಂತಹ ವ್ಯಕ್ತಿಗೆ ಭಾರತದ ಇತಿಹಾಸ, ಚರಿತ್ರೆ ಸಾಂಸ್ಕೃತಿಕ ಬದುಕಿನ ಅರಿವು, ಸಾಮಾಜಿಕ ಅಸಮಾನತೆಗಳ ಪ್ರಜ್ಞೆ ಅಗತ್ಯವಾಗಿ ಇದೆ ಅಂದುಕೊಂಡಿದ್ದೆ. 

banner

ಆದರೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅವರು ಜಾತಿ ಹೆಸರನ್ನು ಕರೆಯುತ್ತಿರುವುದನ್ನು ನೋಡಿದರೆ ಇದು ಸಮುದಾಯ ಮಾತ್ರವಲ್ಲದೇ ಸಂವಿಧಾನಕ್ಕೂ ಮಾಡಿದ ಅಪಚಾರ ಆಗಿದೆ. ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ.

ಇನ್ನು ಸೂಕ್ಷ್ಮವಾಗಿ ಗಮನಿಸುವಾಗ ಉಪೇಂದ್ರ ಅವರು ತಮ್ಮ ಮಾತುಗಳಿಗೆ ಪೂರಕವಾಗಿ ಹೊಲಗೇರಿ ಎಂಬ ಪದವನ್ನು ಬಳಸಿರುವುದೇ ಅಪ್ರಸ್ತುತ. ಜೊತೆಗೆ ಅವರು ಕ್ಷಮೆಯಾಚನೆಯಲ್ಲೂ ಸಹ ನಾನೂ ಕೂಡಾ ಬಡತನದಿಂದ ಬಂದಿದ್ದೇನೆ ಎಂದು ಹೇಳುತ್ತಿದ್ದಾರೆ. ಆದರೆ ಬಡತನವೇ ಬೇರೆ ಜಾತಿ ಆಧಾರಿತವಾದ ಸಾಮಾಜಿಕ ಅಸಮಾನತೆಯೇ ಬೇರೆ ಎಂಬ ಸಂಗತಿಯು ಉಪೇಂದ್ರ ಅವರಿಗೆ ಸಹಜವಾಗಿ ತಿಳಿದಿಲ್ಲ ಎಂದು ಕಾಣುತ್ತದೆ.

ಹೀಗಾಗಿ ಸಾರ್ವಜನಿಕ ಜೀವನದಲ್ಲಿ ಇರುವ ಅವರು ಈ ದೇಶದ ಅಸಮಾನತೆ ಮತ್ತು ನೋವಿನ ಚರಿತ್ರೆಯನ್ನೇ ತಿಳಿಯದಿದ್ದ ಮೇಲೆ ಇವರ ಸಮಾಜ ಬದಲಾಯಿಸುವಂತಹ ಮಾತುಗಳಿಗೆ ಯಾವ ಅರ್ಥವಿದೆ.

ಈಗಾಗಲೇ ಬಹುತೇಕ ದಲಿತ ಸಂಘಟನೆಗಳು ಈ ಕುರಿತಂತೆ ಮನವಿ ಸಲ್ಲಿಸುತ್ತಿರುವ ಕಾರಣ ಮುಂದೆ ಶೋಷಿತ ಸಮುದಾಯಗಳನ್ನು Taken for granted ಆಗಿ ಉಲ್ಲೇಖಿಸುವ ಪ್ರವೃತ್ತಿಯನ್ನು ನಿಲ್ಲಿಸಲು ಮತ್ತು ಸಮುದಾಯಗಳಿಗೆ ಸಂವಿಧಾನದಲ್ಲೇ ಇರುವ ಸಮಾನ ಘನತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

https://m.facebook.com/story.php?story_fbid=825636368925870&id=100044385431117&mibextid=Nif5oz

 

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

u00a92022u00a0Soledad.u00a0All Right Reserved. Designed and Developed byu00a0Penci Design.

Latest news