14

ವಿಜಯಪುರ: ಸಮಾಜ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿಗಾಗಿ ಪರಿಶಿಷ್ಟ ಜಾತಿ (ಎಸ್‌ಸಿ)ಗೆ ಸೇರಿದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ರಾಜ್ಯದಿಂದ ದಿನಾಂಕ 03-10-2022ರಿಂದ ದಿನಾಂಕ 05-10-2022ರವರೆಗೆ ನಾಗಪೂರ ದೀಕ್ಷಾ ಭೂಮಿಗೆ ಭೇಟಿ ನೀಡಲು ಯಾತ್ರಾರ್ಥಿಗಳಿಗೆ ಆನ್‌ಲೈನ್ ಮೂಲಕ ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ www.sw.kar.nic ರಲ್ಲಿ ದಿನಾಂಕ 16-09-2022 ರಿಂದ 26-09-2022ರವರೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಮೊದಲ ಅರ್ಜಿ ಸಲ್ಲಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಯ್ಕೆಗಾಗಿ ದೀಕ್ಷಾ ಭೂಮಿಗೆ ಭೇಟಿ ನೀಡುವ ಅನುಯಾಯಿಗಳಿಗೆ ತಲಾ 5000 ರೂ. ಪ್ರೋತ್ಸಾಹ ಧನ ಮಂಜೂರಿಸಲಾಗುವುದು.
ಆದ್ದರಿಂದ ವಿಜಯಪುರ ಜಿಲ್ಲೆಯ ಆಸಕ್ತರು ನಿಗಧಿತ ಅವಧಿಯೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.