16
ವಿಜಯಪುರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಮುಂದುವರೆದ ಭಾಗವಾದ ಪ್ರತಿ ಮಂಗಳವಾರ ತಾಲೂಕು ಕಚೇರಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೆಪ್ಟೆಂಬರ್ 20ರಂದು ದೇವರಹಿಪ್ಪರಗಿ ತಾಲೂಕು ಕಚೇರಿಗೆ ಭೇಟಿ ನೀಡುವರು.
ಗ್ರಾಮಸ್ಥರು ತಮ್ಮ ಕುಂದುಕೊರತೆಯ ಮನವಿಗಳನ್ನು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಿಗೆ ನೇರವಾಗಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.