Home ಜಿಲ್ಲೆ ಸಾವಿತ್ರಿಬಾಯಿ ಪುಲೆ ಹೆಸರಿನಲ್ಲಿ 30 ಸಾವಿರ ಮಹಿಳೆಯರಿಗೆ ಸ್ವ-ಉದ್ಯೋಗಕ್ಕೆ ಪ್ರೇರಣೆ ; ಸಚಿವ ಪ್ರಿಯಾಂಕ ಖರ್ಗೆ

ಸಾವಿತ್ರಿಬಾಯಿ ಪುಲೆ ಹೆಸರಿನಲ್ಲಿ 30 ಸಾವಿರ ಮಹಿಳೆಯರಿಗೆ ಸ್ವ-ಉದ್ಯೋಗಕ್ಕೆ ಪ್ರೇರಣೆ ; ಸಚಿವ ಪ್ರಿಯಾಂಕ ಖರ್ಗೆ

by vegadhut@gmail.com.
0 comments

ರಾಜ್ಯದ ಆಯ್ದ 100 ಗ್ರಾಮ ಪಂಚಾಯತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ಗ್ರಾಮಿಣಾಭಿವೃದ್ಧಿ ಸಚಿವ ರ್ಪಿಯಾಂಕ ಖರ್ಗೆ ತಿಳಿಸಿದ್ದಾರೆ.

ಈ ಯೋಜನೆಯಡಿ ಪ್ರತಿ ಜಿಲ್ಲೆಯಿಂದ ಆಯ್ದ 3 ಗ್ರಾಮ ಪಂಚಾಯತಿಗಳಂತೆ ಒಟ್ಟು 29 ಜಿಲ್ಲೆಗಳಿಂದ 87 ಕೇಂದ್ರಗಳು ಹಾಗೂ ಬೆಳಗಾವಿ ಜಿಲ್ಲೆಯಿಂದ 7 ಮತ್ತು ತುಮಕೂರು ಜಿಲ್ಲೆಯಲ್ಲಿ 6 ಕೇಂದ್ರಗಳಂತೆ ಒಟ್ಟು 100 ಕೇಂದ್ರಗಳನ್ನು ಪ್ರಾರಂಭಿಸಲಾಗುವುದು. ಪ್ರಾಯೋಗಿಕವಾಗಿ 100 ಗ್ರಾಮ ಪಂಚಾಯತಿಗಳಲ್ಲಿ ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ-ಮಹಿಳಾ ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದ್ದು, ಈ ಕೇಂದ್ರಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.

ಪ್ರತಿ ಕೇಂದ್ರದಲ್ಲಿ ಸ್ವ-ಉದ್ಯೋಗ ಕೈಗೊಳ್ಳುವ ಮಹಿಳೆಯರಿಗೆ ಸರ್ಕಾರದ ಕೌಶಲ್ಯ ಅಭಿವೃದ್ಧಿ ನಿಗಮ, ರುಡೈಟಿ-ಆರ್ಸೆಟಿ ಸರ್ಕಾರೇತರ ಬೆಂಬಲ ಸಂಸ್ಥೆಗಳ (TSA) ಮೂಲಕ ತರಬೇತಿ ನೀಡಿ, ಬ್ಯಾಂಕುಗಳೊಂದಿಗೆ ಸಂಪರ್ಕ ಏರ್ಪಡಿಸಿ, ಅನುಸರಣೆ ಮತ್ತು ಬೆಂಬಲ ನೀಡುವ ಮೂಲಕ 30,000 ಮಹಿಳೆಯರಿಗೆ ಸ್ವ- ಉದ್ಯೋಗ ಪ್ರಾರಂಭಿಸುವಂತೆ ಪ್ರೇರೇಪಿಸಲಾಗುವುದು, ಪ್ರತಿ ತರಬೇತಿ ಕೇಂದ್ರದಿಂದ 300 ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡುವ ಗುರಿ ಹೊಂದಲಾಗಿದೆ.

ಗ್ರಾಮೀಣ ಪ್ರದೇಶದ ಮಹಿಳೆಯರು ಕೃಷಿಯಿಂದ ಹೆಚ್ಚಿನ ಲಾಭ ಪಡೆಯಲಾಗದೇ, ಆದಾಯ ಗಳಿಕೆಗಾಗಿ ಪರ್ಯಾಯ ವ್ಯವಸ್ಥೆ ಹುಡುಕುತ್ತಿರುವುದರಿಂದ ಹಾಗೂ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉದ್ಯೋಗ ಒದಗಿಸಬಲ್ಲ ಕೌಶಲ್ಯ ತರಬೇತಿಗಳ ಕೊರತೆ ಇರುವುದರಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸುವ ಅವಶ್ಯಕತೆ ಇರುವುದನ್ನು ಗಮನಿಸಿ, ಆಯ-ವ್ಯಯದಲ್ಲಿ ಘೋಷಿಸಿರುವಂತೆ ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ಇದರಿಂದಾಗಿ ಮಹಿಳೆಯರಲ್ಲಿ ಅಡಗಿರುವ ಸಾಮರ್ಥ್ಯ ವೃದ್ಧಿಗೊಳ್ಳುವುದಲ್ಲದೆ, ಉತ್ಪಾದನಾ ಚಟುವಟಿಕೆಗಳನ್ನು ಪ್ರಾರಂಭಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುವುದರ ಜೊತೆಗೆ ಸ್ವಾವಲಂಬಿಗಳನ್ನಾಗಿ ಮಾಡುವ ಮಹತ್ವಾಕಾಂಕ್ಷೆಯನ್ನು ಹೊಂದಿದೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ  ಬರೆದುಕೊಂಡಿದ್ದಾರೆ. 

banner

https://www.facebook.com/share/p/1AWzspTJzM/

 

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

u00a92022u00a0Soledad.u00a0All Right Reserved. Designed and Developed byu00a0Penci Design.

Latest news