Home News ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಸಲೀಮ್ ಮರ್ತೂರ್ ಆಗ್ರಹ

ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಸಲೀಮ್ ಮರ್ತೂರ್ ಆಗ್ರಹ

by vegadhut@gmail.com.
0 comments

ಸಿಂದಗಿ, ಜೂನ್ 16: ರಾಜ್ಯ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಭವಿಷ್ಯದ ಸಚಿವ ಸಂಪುಟದಲ್ಲಿ ಮಹತ್ವದ ಸಚಿವ ಸ್ಥಾನ ನೀಡಬೇಕೆಂದು ಸಿಂದಗಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಲೀಮ್ ಮರ್ತೂರ್ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಜಮೀರ್ ಅಹ್ಮದ್ ಖಾನ್ ಅವರು ಪಕ್ಷದ ಸಂಘಟನೆ ಬಲಪಡಿಸುವಲ್ಲಿ, ಅಲ್ಪಸಂಖ್ಯಾತ ಸಮುದಾಯದ ಧ್ವನಿಯಾಗಿ ಕಾರ್ಯನಿರ್ವಹಿಸುವಲ್ಲಿ ಹಾಗೂ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿರುವುದಾಗಿ ತಿಳಿಸಿದ್ದಾರೆ.

ಅವರ ಅನುಭವ, ಸಂಘಟನಾ ಸಾಮರ್ಥ್ಯ, ನಾಯಕತ್ವ ಗುಣಗಳು ಹಾಗೂ ಜನಪರ ಕಾರ್ಯಗಳನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದ್ದು, ಇದರಿಂದ ಪಕ್ಷಕ್ಕೆ ಮತ್ತಷ್ಟು ಬಲ ಸಿಗಲಿದೆ ಎಂದು ಸಲೀಮ್ ಮರ್ತೂರ್ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಅಭಿವೃದ್ಧಿ ಹಾಗೂ ಪಕ್ಷದ ಬಲವರ್ಧನೆಗೆ ಜಮೀರ್ ಅಹ್ಮದ್ ಖಾನ್ ಅವರ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಅಗತ್ಯವಿದ್ದು, ಅವರಿಗೆ ಪ್ರಮುಖ ಜವಾಬ್ದಾರಿ ನೀಡುವ ಮೂಲಕ ಕಾಂಗ್ರೆಸ್ ಪಕ್ಷವು ಅಲ್ಪಸಂಖ್ಯಾತ ಸಮುದಾಯದ ವಿಶ್ವಾಸವನ್ನು ಮತ್ತಷ್ಟು ಗಟ್ಟಿಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

u00a92022u00a0Soledad.u00a0All Right Reserved. Designed and Developed byu00a0Penci Design.

Latest news