Home News ಮಾದರಿ ನೆಡುತೋಪು ನಿರ್ಮಿಸಲು ಜಿಪಂ ಸಿಇಓ ರಾಹುಲ್ ಶಿಂಧೆ ಸೂಚನೆ

ಮಾದರಿ ನೆಡುತೋಪು ನಿರ್ಮಿಸಲು ಜಿಪಂ ಸಿಇಓ ರಾಹುಲ್ ಶಿಂಧೆ ಸೂಚನೆ

by vegadhut@gmail.com.
0 comments
ವಿಜಯಪುರ : ಅರಣ್ಯ ಇಲಾಖೆಯ ವಿವಿಧ ಯೋಜನೆಗಳಡಿ ನಿರ್ಮಿಸಿದ ಭೂತನಾಳ ಸಸ್ಯ ಕ್ಷೇತ್ರಕ್ಕೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ರಾಹುಲ್ ಶಿಂಧೆ ಭೇಟಿ ನೀಡಿದರು.
ಅರಣ್ಯ ಇಲಾಖೆ ಹಾಗೂ ಜಿಲ್ಲಾ ಪಂಚಾಯತಿ ಅನುದಾನದಡಿ ವಿವಿಧ ಜಾತಿಯ ಹಾಗೂ ವಿವಿಧ ಅಳತೆಯ ಸಸಿಗಳನ್ನು ಬೆಳೆಸಿ, ನಿರ್ವಹಣೆ ಮಾಡುತ್ತಿರುವ 70,000 ಸಸಿಗಳನ್ನು ಇದೆ ವೇಳೆ ವೀಕ್ಷಿಸಿ ಖುಷಿ ವ್ಯಕ್ತಪಡಿಸಿದರು.

2021-22ನೇ ಸಾಲಿನಲ್ಲಿ ಜಿಲ್ಲಾ ಪಂಚಾಯತಿಯ ಅಭಿವೃದ್ಧಿ ಅನುದಾನದಡಿ ಕೈಗೊಂಡ ಅಭಿವೃದ್ಧಿ ಕೆಲಸಗಳನ್ನು ಪರಿಶೀಲಿಸಿ, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ಬೆಳೆಸಿ, ಮಾದರಿ ನೆಡುತೋಪುಗಳನ್ನು ನಿರ್ಮಾಣ ಮಾಡಲು ಸೂಚಿಸಿದರು. ಈಗಾಗಲೇ ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳ ಸ್ವ-ಸಹಾಯ ಸಂಘಗಳ ಮಹಿಳೆಯರಿಂದ ನರ್ಸರಿ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸದರಿ ಸ್ವ-ಸಹಾಯ ಸಂಘಗಳ ಸದಸ್ಯರನ್ನು ಸದರಿ ಸಸ್ಯಕ್ಷೇತ್ರಕ್ಕೆ ಭೇಟಿ ನೀಡಲು ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿಯವರಿಗೆ ಸೂಚಿಸಿದರು. ನಂತರ ಸಸ್ಯ ಕ್ಷೇತ್ರದ ಪಕ್ಕದಲ್ಲಿ ಕೆರೆ ಇದ್ದು, ಕೆರೆಗೆ ಹೊಂದಿಕೊಂಡಿರುವ ನಾಲಾಗಳಿಗೆ ಬಹುಕಮಾನುಗಳ ತಡೆಗೋಡೆ ನಿರ್ಮಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಪಂಚಾಯತಿಯ ಮಾನ್ಯ ಉಪಕಾರ್ಯದರ್ಶಿಗಳಾದ ಡಾ.ವಿಜಯಕುಮಾರ ಆಜೂರ, ವಿಜಯಪುರದ ಸಾಮಾಜಿಕ ಅರಣ್ಯ ವಲಯ ಅಧಿಕಾರಿಗಳಾದ ಗಿರೀಶ್ ಹಲಕುಡೆ, ಪ್ರಾದೇಶಿಕ ಅರಣ್ಯ ವಲಯ ಅಧಿಕಾರಿಗಳಾದ ಸಂತೋಷಕುಮಾರ ಅಜೂರ ಹಾಗೂ ಇತರರು ಉಪಸ್ಥಿತರಿದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

u00a92022u00a0Soledad.u00a0All Right Reserved. Designed and Developed byu00a0Penci Design.

Latest news