Home News ಭಿಕ್ಷಾಟನೆ ನಿರ್ಮೂಲನೆ ಜನಜಾಗೃತಿಗೆ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಚಾಲನೆ

ಭಿಕ್ಷಾಟನೆ ನಿರ್ಮೂಲನೆ ಜನಜಾಗೃತಿಗೆ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಚಾಲನೆ

by vegadhut@gmail.com.
0 comments
ವಿಜಯಪುರ : ಬಿಕ್ಷಾಟನೆ ನಿರ್ಮೂಲನೆಯ ಜನಜಾಗೃತಿ ವಾಹನಕ್ಕೆ ಅಪರ ಜಿಲ್ಲಾಧಿಕಾರಿಗಳಾದ ರಮೇಶ ಕಳಸದ ಅವರು ಸೆಪ್ಟೆಂಬರ್ 20ರಂದು, ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಹಸಿರು ನಿಶಾನೆ ತೋರಿದರು.
ಈ ವೇಳೆ ಮಾತನಾಡಿದ ಅವರು, ಕರ್ನಾಟಕ ಬಿಕ್ಷಾಟನೆ ನಿಷೇಧ ಅಧಿನಿಯಮ 1975ರ ಸೆಕ್ಷನ್ 3ರನ್ವಯ ಭೀಕ್ಷೆ ಬೇಡುವುದನ್ನು ನಿಷೇಧಿಸಲಾಗಿದೆ. ಭಿಕ್ಷೆ ಬೇಡುವುದು ಮತ್ತು ನೀಡುವುದು ಅಪರಾಧವಾಗಿದೆ. ಈ ಬಗ್ಗೆ ಸಾರ್ವಜನಿಕರು ಅರಿಯಬೇಕು ಎಂದು ತಿಳಿಸಿದರು.
ಈ ವೇಳೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ರಾಮನಗೌಡ ಕನ್ನೊಳ್ಳಿ ಅವರು ಮಾತನಾಡಿ, ವಿಜಯಪುರ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಕೇಂದ್ರ ಪರಿಹಾರ ಸಮಿತಿ ಮತ್ತು ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರ ವಿಜಯಪುರ ಹಾಗೂ ಬಾಗಲಕೋಟೆ ಅವರಿಂದ ಈ ಕಾರ್ಯಕ್ರಮ ನಡೆಯುತ್ತಿದೆ. ವಿಜಯಪುರ ನಗರದಲ್ಲಿ ವಿವಿಧ ಸ್ಥಳಗಳಲ್ಲಿ ಭಿಕ್ಷಾಟನೆ ಬೇಡುವುದು ಮತ್ತು ನೀಡುವುದು ಅಪರಾಧ ಕುರಿತು ಪ್ರಚಾರ ಮಾಡಲಾಗುತ್ತದೆ. ಭಿಕ್ಷುಕರ ಸಹಾಯವಾಣಿ ಸಂಖ್ಯೆ:10581ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ತಿಳಿಸಿದರು.
ಈ ವೇಳೆ ಸಮಾಜ ಕಲ್ಯಾಣ ಇಲಾಖೆಯ ಅಧೀಕ್ಷಕರಾದ ಬಸವರಾಜ್ ಎಸ್ ನಾಟಿಕರ್., ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರ ವಿಜಯಪುರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

u00a92022u00a0Soledad.u00a0All Right Reserved. Designed and Developed byu00a0Penci Design.

Latest news