16

ವಿಜಯಪುರ ಜಿಲ್ಲೆಯಲ್ಲಿ ಕಳೆದ 10 ವರ್ಷಗಳಿಂದ ಖಾದಿ ಆಯೋಗ, ಖಾದಿ ಮಂಡಳಿಯ ವತಿಯಿಂದ ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ವಸ್ತು ಪ್ರದರ್ಶನಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಪ್ರತಿ ವರ್ಷವು ಈ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯುತ್ತಿದೆ. ಜಿಲ್ಲಾ ಪಂಚಾಯಿತಿ ವತಿಯಿಂದ ಸ್ವ ಸಹಾಯ ಗುಂಪಿನವರು ತಯಾರಿಸಿದ ಆಹಾರ ಹಾಗೂ ಕರಕುಶಲ ವಸ್ತುಗಳು ಭಾಗವಹಿಸುತ್ತವೆ. ಖಾದಿ ಮಂಡಳಿಯಿAದ ಧನಸಹಾಯ ಪಡೆದ ಫಲಾನುಭವಿಗಳು ವಸ್ತು ಪ್ರದರ್ಶನದಲ್ಲಿ ಭಾಗವಹಿಸುತ್ತಿದ್ದು, ಪ್ರತಿ ವರ್ಷದಂತೆ ಈ ವರ್ಷವು ಕೂಡ 2 ಕೋಟಿ ರೂ. ಗಿಂತ ಹೆಚ್ಚಿನ ಮಾರಾಟ ಆಗುವ ನಿರೀಕ್ಷೆ ಇಟ್ಟಿದ್ದೇವೆ. ವಿಜಯಪುರ ಜಿಲ್ಲೆಯಲ್ಲಿ ಖಾದಿ, ರೇಷ್ಮೆ ಹಾಗೂ ಉಣ್ಣೆಯ ವಸ್ತುಗಳಿಗೆ ಹೆಚ್ಚಿನ ಬೇಡಿಕೆ ಇರುತ್ತದೆ. ದಸರಾ ಹಾಗೂ ದೀಪಾವಳಿ ಪ್ರಯುಕ್ತ ವಿಶೇಷವಾಗಿ ಶುದ್ಧ ರೇಷ್ಮೆ ಸೀರೆಗಳು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿದ್ದಾರೆ. ವಿಜಯಪುರ ಜಿಲ್ಲೆಯ ನಾಗರಿಕರು ಈ ವಸ್ತು ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ಹೆಚ್ಚಿನ ಪ್ರಮಾಣದಲ್ಲಿ ವಸ್ತುಗಳನ್ನು ಖರೀದಿಸಿ ವಸ್ತು ಪ್ರದರ್ಶನಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಖಾದಿ ಮಂಡಳಿಯ ಜಿಲ್ಲಾ ಅಭಿವೃದ್ಧಿ ಅಧಿಕಾರಿಗಳಾದ ಸಾವಿತ್ರಿ ದಳವಾಯಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಪ್ರತಿ ವರ್ಷದಂತೆ ಈ ವರ್ಷವೂ ಐತಿಹಾಸಿಕ ನಗರಿ ವಿಜಯಪುರ ಜಿಲ್ಲೆಯಲ್ಲಿ ಕರ್ನಾಟಕ ಸರ್ಕಾರದ ಸಹಾಯದಿಂದ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಕಾರ್ಯಕ್ರಮವು ಕಂದಗಲ್ ಶ್ರೀ ಹನುಮಂತರಾಯ ಜಿಲ್ಲಾ ರಂಗಮಂದಿರದ ಆವರಣದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 12ರವರೆಗೆ ಒಟ್ಟು 15 ದಿನಗಳ ಕಾಲ ಆಯೋಜಿಸಲಾಗಿದೆ.
ಈ ವಸ್ತು ಪ್ರದರ್ಶನದಲ್ಲಿ ಜಿಲ್ಲೆಯ, ರಾಜ್ಯದ ಹಾಗೂ ಹೊರ ರಾಜ್ಯಗಳಿಂದ ಮಳಿಗೆಗಳನ್ನು ಹಾಕಿಸಲಾಗುತ್ತಿದೆ. ವಿಜಯಪುರ, ಬಾಗಲಕೋಟೆ, ಗದಗ, ಬೆಳಗಾವಿ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಬಳ್ಳಾರಿ, ಕೊಪ್ಪಳ, ಬೀದರ, ಮಂಡ್ಯ, ಮೈಸೂರು ಹಾಗೂ ಹೊರ ರಾಜ್ಯಗಳಿಂದ ವಸ್ತು ಪ್ರದರ್ಶನದಲ್ಲಿ ಅರಳೆ ಖಾದಿ, ಉಣ್ಣೆ ಖಾದಿ, ಪಾಲಿವಸ್ತ್ರ , ಶುದ್ಧ ಖಾದಿ ರೇಷ್ಮೆ ಸೀರೆಗಳು, ಕಸೂತಿ ಸೀರೆಗಳು, ಜಾಕೇಟ್, ಕರದಂಟು, ಸಿಹಿ ತಿಂಡಿಗಳು, ಡಿಜೈನ್ ಬ್ಯಾಗಗಳು, ಬಿದಿರು ಬೆತ್ತ, ರೆಡಿಮೇಡ್ ಶರ್ಟ್ಗಳು ಪಾದರಕ್ಷೆಗಳು ಪಿಠೋಪಕರಣಗಳು ಬರುತ್ತವೆ.