
ವಿಜಯಪುರ : ಕರ್ನಾಟಕ ಲೋಕಾಯುಕ್ತದ ಪೊಲೀಸ್ ಅಧೀಕ್ಷಕರಾದ ಅನಿತಾ ಹದ್ದನ್ನವರ ಅವರು, ಲೋಕಾಯುಕ್ತದ ಇನ್ನೀತರ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಜಿಲ್ಲೆಯ ವಿವಿಧೆಡೆ ಭೇಟಿ ನೀಡಿ ಪರಿಶೀಲಿಸಿದರು.
ಚಡಚಣದ ಸರ್ಕಾರಿ ಆಸ್ಪತ್ರೆಗೆ ದಿಢೀರ್‌ನೆ ಭೇಟಿ ನೀಡಿ, ಅಲ್ಲಿನ ಕುಂದುಕೊರತೆಗಳ ಬಗ್ಗೆ ವಿಚಾರಿಸಿದರು. ಆಸ್ಪತ್ರೆಯಲ್ಲಿ ಮೂಲ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ವೈದ್ಯರು ಇಲ್ಲಿದಿರುವುದನ್ನು ಮತ್ತು ಬಹುತೇಕ ಸಿಬ್ಬಂದಿ ಗೈರು ಇರುವುದನ್ನು ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮಕ್ಕಳ ಆರೋಗ್ಯ ಪುನಃಶ್ಚೇತನ ಕೇಂದ್ರಕ್ಕು ಸಹ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತದ ಪೊಲೀಸ್ ನಿರೀಕ್ಷಕರಾದ ಆನಂದ ಟಕ್ಕನ್ನವರ ಮತ್ತು ಸಿಬ್ಬಂದಿ ಎಂ.ಎಸ್ ತೆಗ್ಗಳ್ಳಿ ಹಾಗೂ ಅಮರಖೇಡ ಇದ್ದರು.