16

ವಿಜಯಪುರ : ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಸೆಪ್ಟೆಂಬರ್ 30ರಂದು ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಇಂದು ಬೆಳಗ್ಗೆ 9.15ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು ಬೆಳಗ್ಗೆ 10 ಗಂಟೆಗೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಆಣೆಕಟ್ಟಿನ ಆವರಣದಲ್ಲಿನ ಹೆಲಿಪ್ಯಾಡಗೆ ಆಗಮಿಸುವರು. ಆಲಮಟ್ಟಿ ಜಲಾಶಯದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರೀ ಜಲಾಶಯಕ್ಕೆ ಬಾಗಿನ ಅರ್ಪಣೆ ಹಾಗೂ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ನೂತನ ಪ್ರವಾಸಿ ಮಂದಿರಕ್ಕೆ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿಸುವರು.

ಬಳಿಕ 11 ಗಂಟೆಗೆ ಆಲಮಟ್ಟಿ ಹೆಲಿಪ್ಯಾಡನಿಂದ ಹೊರಟು ಬೆಳಗ್ಗೆ 11.30ಕ್ಕೆ ವಿಜಯಪುರ ನಗರದ ಸೈನಿಕ ಸ್ಕೂಲ್ ಆವರಣದ ಹೆಲಿಪ್ಯಾಡಗೆ ಆಗಮಿಸುವರು. ಸೈನಿಕ ಸ್ಕೂಲ್ ಆವರಣದಲ್ಲಿ ಸೈನಿಕ್ ಸ್ಕೂಲ್ ಹಾಕಿ ಕ್ರೀಡಾಂಗಣವನ್ನು ಉದ್ಘಾಟಿಸುವರು. ಬಳಿಕೆ 11.45ಕ್ಕೆ ಸೈನಿಕ್ ಸ್ಕೂಲ್ ಆವರಣದಿಂದ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ 12 ಗಂಟೆಗೆ ರಾಷ್ಟ್ರೀಯ ಹೆದ್ದಾರಿ ಬಳಿಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣಕ್ಕೆ ಆಗಮಿಸಿ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸುವರು.
ಬಳಿಕ 12.20ಕ್ಕೆ ವಿಜಯಪುರ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕಟ್ಟಡಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು. ಇದೆ ವೇಳೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ 37ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಲಾಂಛನ ಬಿಡುಗಡೆ ಮಾಡುವರು. ಬಳಿಕ ಮಧ್ಯಾಹ್ನ 2.30ಕ್ಕೆ ಸೈನಿಕ ಸ್ಕೂಲ್ ಆವರಣದಲ್ಲಿನ ಹೆಲಿಪ್ಯಾಡ್‌ಗೆ ತೆರಳಿ ಅಲ್ಲಿಂದ ವಾಯುಮಾರ್ಗವಾಗಿ ಬಳ್ಳಾರಿ ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.