Home News ಗಡಿಭಾಗದ ಗ್ರಾಮಗಳಿಗೆ ಕಡ್ಡಾಯ ಭೇಟಿ ನೀಡಿ ; ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ

ಗಡಿಭಾಗದ ಗ್ರಾಮಗಳಿಗೆ ಕಡ್ಡಾಯ ಭೇಟಿ ನೀಡಿ ; ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ

by vegadhut@gmail.com.
0 comments
ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ
ಡಾ.ಸಿ.ಸೋಮಶೇಖರ ಅವರಿಂದ ಅಧಿಕಾರಿಗಳಿಗೆ ಸೂಚನೆ
ವಿಜಯಪುರ : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 1ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಡಿ ಪ್ರಾಧಿಕಾರದ ಸಭೆ ನಡೆಯಿತು.
ಈ ವೇಳೆ ಮಾತನಾಡಿದ ಡಾ.ಸಿ.ಸೋಮಶೇಖರ ಅವರು, ವಿಜಯಪುರ ಜಿಲ್ಲೆಯಲ್ಲಿ ಕೆಲಸ ಮಾಡುವುದು ಅಧಿಕಾರಿಗಳಿಗೆ ಒಂದು ಸುಯೋಗವಿದ್ದಂತೆ. ಗಡಿಭಾಗದ ಜನರನ್ನು ಸಹ ನಾವು ಪ್ರೀತಿಸಬೇಕು. ಗಡಿ ಭಾಗದಲ್ಲಿನ ಜನರಲ್ಲಿ ಪ್ರೀತಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಗಡಿಭಾಗದ ಗ್ರಾಮಗಳಿಗೆ ಕಡ್ಡಾಯ ಭೇಟಿ ನೀಡಿ ಸ್ಪಂದನೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮ ಪಂಚಾಯಿತಿಗಳ ಕ್ರಿಯಾ ಯೋಜನೆಯಲ್ಲಿ ಸಾಂಸ್ಕೃತಿಕ ನಿಧಿಯಾಗಿ ಒಂದು ಲಕ್ಷ ರೂ.ಗಳನ್ನು ಮೀಸಲಿಟ್ಟು ಸಂಸ್ಕೃತಿ ರಕ್ಷಣೆ ಕಾರ್ಯ ಮಾಡಬೇಕು. ಶಾಲಾ ಅಭಿವೃದ್ದಿಗೆ ಸಹಕರಿಸಲು ವ್ಯವಸ್ಥೆ ಮಾಡಬೇಕು.
ಸಾಂಸ್ಕೃತಿಕ ಕಾರ್ಯಚಟುವಟಿಕೆಗಳಿಗೆ ತಾಲೂಕು ಪಂಚಾಯಿತಿಯಿಂದ 2ರಿಂದ 5 ಲಕ್ಷ ಮೀಸಲಿರುವ ವ್ಯವಸ್ಥೆ ಮಾಡಲು ಕ್ರಮ ವಹಿಸಬೇಕು ಎಂದು ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ಶಿಂಧೆ ಅವರಿಗೆ ಸೂಚಿಸಿದರು.
ಗಡಿಭಾಗದ ಶಾಲೆಗಳ ಸ್ಥಿತಿಗತಿಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಜಿಲ್ಲೆಯಲ್ಲಿ 2000 ಶಿಕ್ಷಕರ ಕೊರತೆ ಇದೆ. ಅತಿಥಿ ಶಿಕ್ಷಕರಿಂದ ತರಗತಿಗಳನ್ನು ನಡೆಸಲಾಗುತ್ತಿದೆ ಎಂದು ಇದೆ ವೇಳೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಉಮೇಶ ಶಿರಹಟ್ಟಿಮಠ ಅವರು ಸಭೆಗೆ ಮಾಹಿತಿ ನೀಡಿದರು. ಕನ್ನಡ ಭಾಷಾ ಶಿಕ್ಷಕರ ಕೊರತೆ ಸಹ ಆಗದಂತೆ ನೋಡಿಕೊಳ್ಳಬೇಕು ಎಂದು ಅಧ್ಯಕ್ಷರು ಸೂಚಿಸಿದರು. ಗಡಿಭಾಗದಲ್ಲಿ ಅತ್ಯವಶ್ಯವಿರುವ ಕನ್ನಡ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕ ಮಾಡಲು ಕ್ರಮ ವಹಿಸಲು ತಿಳಿಸಿದರು.

ಜಿಲ್ಲೆಯಲ್ಲಿ, ನಾಡಿಗಾಗಿ ಶ್ರಮಿಸಿದ ದಾರ್ಶನಿಕರ ಸ್ಮಾರಕಗಳ ರಕ್ಷಣೆಗೆ ಒತ್ತು ಕೊಡಬೇಕು. ಗಡಿಗೆ ಹೊಂದಿಕೊಂಡ ಹಳ್ಳಿಗಳಲ್ಲಿ ಕನ್ನಡ ಹೆಸರಗಳನ್ನು ಬದಲಿಸುವ ಕೃತ್ಯಕ್ಕೆ ತಡೆ ಒಡ್ಡಬೇಕು ಎಂದು ತಿಳಿಸಿದ ಅಧ್ಯಕ್ಷರು, ಗಡಿ ಸ್ವಾಗತ ಕಮಾನು ಮಾಡಲು ಪ್ರಸ್ತಾವನೆ ಸಿದ್ದಪಡಿಸಲು ತಿಳಿಸಿದರು. ಅವಶ್ಯವಿರುವ ಗಡಿ ಸಂಪರ್ಕ ರಸ್ತೆ ನಿರ್ಮಾಣ ಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು. ಗಡಿ ಮಹಿಳಾ ಯುವಕ ಸಂಘಗಳಿAದ ಸಾಂಸ್ಕೃತಿಕ ಕಾರ್ಯಕ್ರಮ ಮಾಡಿಸಲು ಸಲಹೆ ಮಾಡಿದರು.
ಗಡಿಭಾಗದ ಹಳ್ಳಿಗಳಲ್ಲಿ ಉತ್ತಮ ಶಿಕ್ಷಕರು ಯಾರು? ಉತ್ತಮ ಮಹಿಳಾ ಸಂಘ ಯಾವುದು? ಎಂಬುದನ್ನು ಗುರುತಿಸಿ ಅವರಿಗೆ ಪುರಸ್ಕಾರ ಕೊಡುವ ಕ್ರಿಯಾಯೋಜನೆ ಸಿದ್ಧಪಡಿಸಿ ಸಲ್ಲಿಸಬೇಕು. ಗಡಿಪ್ರದೇಶದಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯದ ಶಾಲೆಗಳು ಮತ್ತು ವಸತಿ ನಿಲಯಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಅಂಗನವಾಡಿ ಕಟ್ಟಡಗಳಿಗೆ ನಿವೇಶನ ನೀಡುವ ಕಾರ್ಯ ಮಾಡಬೇಕು ಎಂದು ಅಧ್ಯಕ್ಷರು ಆಯಾ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಂಸ್ಧೆಗಳಿಗೆ ಚೆಕ್ ವಿತರಣೆ: ಸಭೆಯಲ್ಲಿ ಗಡಿಭಾಗದ ಸಮಸ್ಯೆಗಳ ಬಗ್ಗೆ ಹಾಗೂ ಪ್ರಾಧಿಕಾರದಿಂದ ಬಿಡುಗಡೆಯಾದ ಅನುದಾನದ ಬಿಡುಗಡೆಯ ವಿಳಂಬದ ಬಗ್ಗೆ ಚರ್ಚೆ ನಡೆಯಿತು. ಶಾಲಾ ಕಾಮಗಾರಿಗಳ ಬಗ್ಗೆ ವರದಿ ಪಡೆದು ಹಣಬಳಕೆ ಪ್ರಪತ್ರ ಸಲ್ಲಿಸಲು ಸೂಚಿಸಲಾಯಿತು. ಇದೆ ಸಂದರ್ಭದಲ್ಲಿ ಗಡಿಭಾಗದ ಶಾಲೆಗಳ ಮೂಲಭೂತ ಸೌಕರ್ಯಗಳಿಗೆ ಸಂಸ್ಧೆಗಳಿಗೆ ಚೆಕ್ ವಿತರಿಸಲಾಯಿತು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಹಾಗೂ ಅನುದಾನ ಬಳಕೆ ಪ್ರಮಾಣ ಪತ್ರವನ್ನು ತಕ್ಷಣ ಸ್ಥಳ ಪರಿಶೀಲನೆ ಮಾಡಿ ಪ್ರಾಧಿಕಾರಕ್ಕೆ ಸಲ್ಲಿಸಲು ಸೂಚನೆ ನೀಡಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ಬಿ ದಾನಮ್ಮನವರ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಪ್ರಕಾಶ್ ಮತ್ತಿಹಳ್ಳಿ, ಅಪರ ಜಿಲ್ಲಾಧಿಕಾರಿಗಳಾದ ರಮೇಶ ಕಳಸದ, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ.ರಾಮ್ ಎಲ್.ಅರಸಿದ್ಧಿ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ರಾಮಚಂದ್ರ ಗಡಾದೆ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಬಿ.ನಾಗರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಕೆ.ಕೆ.ಚವ್ಹಾಣ್ ಹಾಗೂ ಇನ್ನೀತರ ಇಲಾಖೆಗಳ ಅಧಿಕಾರಿಗಳು ಇದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

u00a92022u00a0Soledad.u00a0All Right Reserved. Designed and Developed byu00a0Penci Design.

Latest news