Home News ನೂತನ ಗಾಂಧೀ ಭವನದಲ್ಲಿ ಅರ್ಥಪೂರ್ಣವಾಗಿ ನಡೆದ ಗಾಂಧಿ ಜಯಂತ್ಯೋತ್ಸವ

ನೂತನ ಗಾಂಧೀ ಭವನದಲ್ಲಿ ಅರ್ಥಪೂರ್ಣವಾಗಿ ನಡೆದ ಗಾಂಧಿ ಜಯಂತ್ಯೋತ್ಸವ

by vegadhut@gmail.com.
0 comments
ವಿಜಯಪುರ : ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಂದ ಸೆಪ್ಟೆಂಬರ್ 30ರಂದು ಲೋಕಾರ್ಪಣೆಯಾದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಿಲ್ಲಾ ಗಾಂಧೀ ಭವನದಲ್ಲಿ ಅಕ್ಟೋಬರ್ 2ರಂದು ಜಿಲ್ಲಾಡಳಿತದಿಂದ ಗಾಂಧೀಜಿ ಜಯಂತಿ ದಿನಾಚರಣೆ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು.
ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರ ಸೂಚನೆಯಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಮತ್ತು ಜಿಲ್ಲೆಯ ಗಣ್ಯರು ಹಾಗೂ ಸಾರ್ವಜನಿಕರು ಶಾಂತಿ ಸಂದೇಶದ ಬಿಳಿ ವಸ್ತ್ರ ಧರಿಸಿ ಆಗಮಿಸಿದ್ದು ವಿಶೇಷವಾಗಿತ್ತು. ಗಾಂಧೀ ಭವನದ ಅಂಗಳದಲ್ಲಿ ಹಬ್ಬದ ಸಂಭ್ರಮ ಕಂಡು ಬಂದಿತು.
ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ವಿಜಯಪುರ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಹರಿ ಗೋಳಸಂಗಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ವೆಂಕಣ್ಣ ಬಿ. ಹೊಸಮನಿ ಸೇರಿದಂತೆ ಇನ್ನೀತರ ಗಣ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಆಗಮಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.
ನೂತನ ಜಿಲ್ಲಾ ಗಾಂಧಿಭವನದ ಅಂಗಳಕ್ಕೆ ಆಗಮಿಸುತ್ತಿದ್ದಂತೆ ಸುಂದರ ಉದ್ಯಾನವನ, ಆಕರ್ಷಕ ಕಟ್ಟಡ, ಕಟ್ಟಡದಲ್ಲಿನ ಪ್ರಾರ್ಥನ ಮಂದಿರ, ಗ್ರಂಥಾಲಯ, ಸಭಾಂಗಣ, ಛಾಯಾ ಚಿತ್ರ ಪ್ರದರ್ಶನ ವ್ಯವಸ್ಥೆ ಕಂಡು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಗಾಂಧೀ ಜಯಂತಿ ಹಿನ್ನೆಲೆಯಲ್ಲಿ ಗಾಂಧಿಭವನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌ನಿAದ ಸರ್ವಧರ್ಮ ಪ್ರಾರ್ಥನೆಗೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಶಾಸಕರು, ನ್ಯಾಯಾಧೀಶರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೆಚ್.ಡಿ.ಆನಂದಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿಗಳಾದ ರಮೇಶ ಕಳಸದ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಗಾಂಧಿ ವಿಚಾರಧಾರೆಯ ಬಾಬುಪೌಡ ಪಾಟೀಲ, ನೀಲೇಶ ಬೇನಾಳ ಸೇರಿದಂತೆ ಇತರರು ವೇದಿಕೆಯ ಮೇಲೆ ಸಾಲಾಗಿ ಕುಳಿತು ಸರ್ವಧರ್ಮ ಪ್ರಾರ್ಥನೆಯಲ್ಲಿ ಭಾಗಿಯಾದರು.
ಈ ವೇಳೆ ಶಾಸಕರು ಮಾತನಾಡಿ, ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ವಿಶೇಷ ಕಾಳಜಿ ವಹಿಸಿದ್ದರಿಂದ ವಿಜಯಪುರ ಜಿಲ್ಲೆಯಲ್ಲಿ ಜಿಲ್ಲಾ ಗಾಂಧೀಭವನವು ಅಚ್ಚುಕಟ್ಟಾಗಿ ನಿರ್ಮಾಣವಾಗಿದೆ. ಇದು ಅಭಿನಂದನಾರ್ಹ ಸಂಗತಿ ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಮಾತನಾಡಿ, ಜಿಲ್ಲಾಡಳಿತದ ಕರೆಯ ಮೇರೆಗೆ ಜಿಲ್ಲೆಯ ಗಣ್ಯರು ಮತ್ತು ಸಾರ್ವಜನಿಕರು ಸಹ ಬಿಳಿ ಖಾದಿ ಬಟ್ಟೆ ಧರಿಸಿ ಕಾರ್ಯಕ್ರಮಕ್ಕೆ ಆಗಮಿಸಿ ರಾಷ್ಟ್ರ ಪ್ರೇಮವನ್ನು ತೋರಿಸಿದ್ದು ಸಂತಸ ತಂದಿದೆ ಎಂದು ತಿಳಿಸಿದರು. ಸಕಾಲಿಕವಾದ ಗಾಂಧೀಜಿಯವರ ಮತ್ತು ಶಾಸ್ತ್ರೀಜಿಯವರ ವಿಚಾರಧಾರೆಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಉಪನ್ಯಾಸಕರಾದ ಹಿರೇಮಠ ಅವರು ವಿಶೇಷ ಉಪನ್ಯಾಸ ನೀಡಿ, ಗಾಂಧೀಜಿಯವರು ತಾವು ನಂಬಿದ ತತ್ವಸಿದ್ಧಾಂತಗಳಿಗೆ ಬದ್ಧವಾಗಿ ನಡೆದರು. 1915ರವರೆಗೆ ಅವರನ್ನು ಯಾರು ಸಹ ಗುರುತಿಸಲಿಲ್ಲ. ಗುರುವಿನ ಮಾತಿನಂತೆ ಗಾಂಧೀಜಿಯವರು ಇಡೀ ಭಾರತವನ್ನು ಸುತ್ತಿದ್ದರು. ಚಳುವಳಿಯಲ್ಲಿ ತೊಡಗಿದರು. ದೇಶವಿದೇಶಗಳಲ್ಲಿ ಅನೇಕ ಮುಖ್ಯ ಬೀದಿ, ಉಪಬೀದಿಗಳಿಗೆ ಗಾಂಧೀಜಿ ಅವರ ಹೆಸರಿಡಲಾಗಿದೆ. ಗಾಂಧೀಜಿಯವರ ಮೇಲೆ ಸಾವಿರಾರು ಸಂಖ್ಯೆಯಲ್ಲಿ ಜೀವನ ಚರಿತ್ರೆಗಳಿವೆ. 1260 ಸ್ಟಡಿ ಸೆಂಟರಗಳಿಗವೆ. ಇದು ಗಾಂಧೀಜಿಯವರ ಪ್ರಭಾವ ಮತ್ತು ಅವರ ಬಹುದೊಡ್ಡ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ತಹಸೀಲ್ದಾರರಾದ ಸಿದ್ದರಾಯ ಬೋಸಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರಾಜಶೇಖರ ಡಂಬಳ, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಮಹಾವೀರ ಬೋರಣ್ಣನವರ, ವಾರ್ತಾ ಇಲಾಖೆಯ ಅಧಿಕಾರಿ ಗವಿಸಿದ್ಧಪ್ಪ ಹೊಸಮನಿ, ನಿರ್ಮಿತಿ ಕೇಂದ್ರದ ಯೋಜನಾಧಿಕಾರಿಗಳಾದ ಬಿ.ವೈ.ಸುರಕೋಡ, ವಿವಿಧ ಇಲಾಖೆಗಳ ಅಧಿಕಾರಿಗಳಾದ ರೂಪಾ ಎಲ್., ಮಲ್ಲಿಕಾರ್ಜುನ ಭಜಂತ್ರಿ, ಎಂ.ಎಸ್.ಬರಗಿಮಠ, ಸಿದ್ದರಾಮ ಮಾರಿಹಾಳ, ಸಾವಿತ್ರಿ ದಳವಾಯಿ, ಬಿ.ನಾಗರಾಜ ಸೇರಿದಂತೆ ಇತರರು ಇದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

u00a92022u00a0Soledad.u00a0All Right Reserved. Designed and Developed byu00a0Penci Design.

Latest news