15
ವಿಜಯಪುರ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರನ್ನಾಗಿ ಮಹೇಶ ವಿ. ಶಟಗಾರ ಅವರನ್ನು ಆಯ್ಕೆ ಮಾಡಲಾಗಿದೆ. ನಗರದ ಹೊಸ ಪತ್ರಿಕಾ ಭವನದಲ್ಲಿ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಹೇಶ ವಿ. ಶಟಗಾರ ಅವರನ್ನು ಸರ್ವಾನುಮತದಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.